
ಚಾಮರಾಜನಗರ: ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಅಕ್ಟೋಬರ್ 24ರಿಂದ 4 ದಿನಗಳ ಕಾಲ ಪ್ರವೇಶವಿರುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ತಿಳಿಸಿದ್ದಾರೆ.
ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಒಂದೇ ಕಡೆ ಸೇರಿದರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗುತ್ತೆ. ಹೀಗಾಗಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 24ರಿಂದ 4 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ. ಈ ಭಾನುವಾರದಿಂದ ಮುಂದಿನ ಬುಧವಾರದವರೆಗೆ ಭಕ್ತರಿಗೆ ಮಾದಪ್ಪನ ದರ್ಶನ ಭಾಗ್ಯ ಸಿಗುವುದಿಲ್ಲ.
Published On - 2:09 pm, Thu, 22 October 20