ಮಲ್ಲಿಕಾರ್ಜುನ ಖರ್ಗೆ, ಧರಮ್ ಸಿಂಗ್ ಪ್ರಯತ್ನದಿಂದ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿದೆ: ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಮೃತೋತ್ಸವ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕದ ಜನರಿಗೆ ಶುಭಾಶಯ ಕೋರಿದರು. ಅಲ್ಲದೆ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಉದ್ಯೋಗದಲ್ಲಿ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ, ಧರಮ್ ಸಿಂಗ್ ಪ್ರಯತ್ನದಿಂದ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿದೆ: ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
| Updated By: Rakesh Nayak Manchi

Updated on: Sep 17, 2023 | 10:05 AM

ಕಲಬುರಗಿ, ಸೆ.17: ಎನ್​ಡಿಎ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಪ್ರಸ್ತಾವ ತಿರಸ್ಕಾರ ಮಾಡಿತ್ತು. ಆದರೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಧರಮ್ ಸಿಂಗ್ ಅವರ ಪ್ರಯತ್ನದಿಂದ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ನಗರದ ಡಿಆರ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನ ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಿದರು.

ಭಾಷಣದ ಆರಂಭದಲ್ಲಿ ಕಲ್ಯಾಣ ಕರ್ನಾಟಕದ ಜನರಿಗೆ ಶುಭಾಶಯ ಕೋರಿದ ಸಿದ್ದರಾಮಯ್ಯ, ರಾಷ್ಟ್ರ ಧ್ವಜಾರೋಹಣ ಮಾಡಿದ್ದು ಧನ್ಯತಾ ಭಾವ ಮೂಡಿಸಿದೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಉದ್ಯೋಗದಲ್ಲಿ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಕಲಬುರಗಿ, ರಾಯಚೂರು, ಬೀದರ್ ಜಿಲ್ಲೆಯ ಜನರಿಗೆ ಹೈದ್ರಾಬಾದ್ ನಿಜಾಮನ ಆಳ್ವಿಕೆಯಿಂದ ಸ್ವತಂತ್ರ ಸಿಕ್ಕಿರಲಿಲ್ಲ. ರಮಾನಂದ ತೀರ್ಥರು ಸೇರಿ ಅನೇಕರು ಮತ್ತೊಮ್ಮೆ ಸ್ವತಂತ್ರಕ್ಕಾಗಿ ಹೋರಾಟ ಆರಂಭಿಸಿದ್ದರು. ಅನೇಕ ಸ್ವತಂತ್ರ ಹೋರಾಟಗಾರರು ಮತ್ತು ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರಯತ್ನದಿಂದ ಹೈದ್ರಾಬಾದ್ ಭಾರತದ ಒಕ್ಕೂಟದಲ್ಲಿ ಸೇರ್ಪಡೆಯಾಯ್ತು ಎಂದರು.

ಇದನ್ನೂ ಓದಿ: Honesty: ವಿಶ್ವೇಶ್ವರಯ್ಯ ಅವರಲ್ಲಿದ್ದ ಪ್ರಾಮಾಣಿಕತೆಗೆ ಭಾರತ ರತ್ನ ಕೊಟ್ಟರು -ಎಂದು ಹೃದಯತುಂಬಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ! ತಪ್ಪದೆ ವಿಡಿಯೋ ನೋಡಿ

ಐದು ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಅಂತಾನೂ ಹೇಳಿದರು.

ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ಹೈದರಾಬಾದ್ ಅನ್ನು ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ರಾಷ್ಟ್ರಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ