AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆಗೆ ಪೇಸ್​​ಮೇಕರ್ ಅಳವಡಿಕೆ ಯಶಸ್ವಿ: ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಪ್ರಧಾನಿ ಮೋದಿ

ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್​ ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ವಿಚಾರಿಸಿದ್ದಾರೆ. ಖರ್ಗೆ ಬೇಗನೆ ಗುಣಮುಖರಾಗಲಿ ಎಂದು ಮೋದಿ ಹಾರೈಸಿದ್ದಾರೆ. ಮತ್ತೊಂದೆಡೆ, ಖರ್ಗೆ ಅವರಿಗೆ ಪೇಸ್​​ಮೇಕರ್ ಅಳವಡಿಕೆ ಯಶಸ್ವಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಗೆ ಪೇಸ್​​ಮೇಕರ್ ಅಳವಡಿಕೆ ಯಶಸ್ವಿ: ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಪ್ರಧಾನಿ ಮೋದಿ
ಮಲ್ಲಿಕಾರ್ಜುನ ಖರ್ಗೆ & ಪ್ರಧಾನಿ ಮೋದಿ
ಗಣಪತಿ ಶರ್ಮಾ
|

Updated on: Oct 02, 2025 | 11:30 AM

Share

ಬೆಂಗಳೂರು, ಅಕ್ಟೋಬರ್ 2: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಖರ್ಗೆ ಆರೋಗ್ಯ ಸಂಬಂಧ ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ, ಅವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಉತ್ತಮವಾಗಿದೆ ಎಂದು ಅವರ ಪುತ್ರ, ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಕೂಡ ಮಾಹಿತಿ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ. ಅವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಪ್ರಧಾನಿ ಮೋದಿ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಎಕ್ಸ್ ಸಂದೇಶ

ಉಸಿರಾಟದ ಸಮಸ್ಯೆಯಿಂದ ಬಳಲಿದ್ದ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆ ಬಗ್ಗೆ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, ಪೇಸ್‌ಮೇಕರ್ ಅಳವಡಿಸುವುದಕ್ಕಾಗಿ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿದೆ. ಇದೊಂದು ಸಣ್ಣ ಪ್ರಕ್ರಿಯೆಯಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ. ಎರಡ್ಮೂರು ದಿನಗಳ ವಿಶ್ರಾಂತಿಯ ನಂತರ ಅವರು ಕೆಲಸ ಕಾರ್ಯಗಳಿಗೆ ಹಾಜರಾಗಲಿದ್ದಾರೆ. ನಿಮ್ಮೆಲ್ಲರ ಕಾಳಜಿ ಮತ್ತು ಬೆಂಬಲಕ್ಕೆ ಧನ್ಯವಾದಗಳು ಎಂದು ಪ್ರಿಯಾಂಕ್ ಖರ್ಗೆ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಎಕ್ಸ್ ಸಂದೇಶ

ವಯೋಸಹಜ ಸಮಸ್ಯೆಗಳು ಮತ್ತು ಉಸಿರಾಟದ ತೊಂದರೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸಲು ವೈದ್ಯರು ಸಲಹೆ ನೀಡಿದ್ದರು. ಹೃದಯ ಬಡಿತದ ಸ್ಥಿರೀಕರಣಕ್ಕೆ ಇದು ಅಗತ್ಯವಿದೆ ಎಂದು ಹೇಳಿದ್ದರು. ಅದನ್ನು ಹೊರತುಪಡಿಸಿ, ಯಾವುದೇ ಸಮಸ್ಯೆ ಇಲ್ಲ. ಆರೋಗ್ಯವಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಂತರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಪೇಸ್​​ಮೇಕರ್ ಅಳವಡಿಕೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!