ಅಗತ್ಯ ವಸ್ತುಗಳನ್ನು ಖರೀದಿಸುವಾಗ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿದ ಮಲ್ನಾಡ್ ಜನ

|

Updated on: Apr 24, 2021 | 10:19 AM

ಅಗತ್ಯ ವಸ್ತುಗಳನ್ನು ಖರೀದಿಸಲು 10 ಗಂಟೆಯ ವರೆಗೆ ಮಾತ್ರ ಅವಕಾಶ ಇರುವುದರಿಂದ ಸೊಪ್ಪು-ತರಕಾರಿ ಕೊಳ್ಳಲು ಜನರು ಮುಗಿ ಬಿದ್ದಿರುವ ದೃಶ್ಯಗಳು ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ಕಂಡುಬಂದಿದೆ. ಇನ್ನೂ ಬೆಳಗಾವಿಯಲ್ಲೂ ವೀಕೆಂಡ್ ಕರ್ಪ್ಯೂ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಗರದಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.

ಅಗತ್ಯ ವಸ್ತುಗಳನ್ನು ಖರೀದಿಸುವಾಗ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿದ ಮಲ್ನಾಡ್ ಜನ
ಶಿವಮೊಗ್ಗ ನಗರದಲ್ಲಿ ತರಕಾರಿ ಖರೀದಿಸುತ್ತಿರುವ ಜನರು
Follow us on

ಚಿಕ್ಕಮಗಳೂರು: ರಾಜ್ಯದಲ್ಲಿ ಇಂದಿನಿಂದ (ಏಪ್ರಿಲ್ 24) ವೀಕೆಂಡ್ ಕರ್ಫ್ಯೂ ಆರಂಭವಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವನ್ನು ನೀಡಲಾಗಿದೆ. ಅಗತ್ಯ ವಸ್ತುಗಳನ್ನು ಖರೀದಿಸುವ ಹೊತ್ತಿಗೆ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವೆಂದು ಸರ್ಕಾರ ಕಟ್ಟು ನಿಟ್ಟಾಗಿ ಹೇಳಿದೆ. ಆದರೆ ಜೀವವನ್ನು ಕಸಿದುಕೊಳ್ಳುವ ಮಹಾಮಾರಿ ಸೋಂಕಿನ ಬಗ್ಗೆ ಭಯ ಪಡದೆ ಜನರು ಮೈ ಮರೆತು ತರಕಾರಿ ಸೇರಿದಂತೆ ಹಲವು ವಸ್ತುಗಳನ್ನು ಖರೀದಿಸುವಲ್ಲಿ ನಿರತರಾಗಿದ್ದಾರೆ.

ಅಗತ್ಯ ವಸ್ತುಗಳನ್ನು ಖರೀದಿಸಲು 10 ಗಂಟೆಯ ವರೆಗೆ ಮಾತ್ರ ಅವಕಾಶ ಇರುವುದರಿಂದ ಸೊಪ್ಪು-ತರಕಾರಿ ಕೊಳ್ಳಲು ಜನರು ಮುಗಿ ಬಿದ್ದಿರುವ ದೃಶ್ಯಗಳು ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ಕಂಡುಬಂದಿದೆ. ಇನ್ನೂ ಬೆಳಗಾವಿಯಲ್ಲೂ ವೀಕೆಂಡ್ ಕರ್ಪ್ಯೂ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಗರದಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಆಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಕಾಲೇಜು ರಸ್ತೆಗಳಲ್ಲಿ ಮನಸ್ಸಿಚ್ಚೆಯಂತೆ ಓಡಾಡುತ್ತಿರುವುದು ಕಂಡುಬಂದಿದೆ.

ಶಿವಮೊಗ್ಗದಲ್ಲೇನೂ ಪರಿಸ್ಥಿತಿ ವಿಭಿನ್ನವಾಗಿಲ್ಲ. ಗಾಂಧಿಬಜಾರ್ನಲ್ಲಿ ಕೊರೊನಾ ನಿಯಮಗಳು ಗಾಳಿಗೆ ತೂರಿದಂತೆ ಕಾಣುತ್ತದೆ. ದೈಹಿಕ ಅಂತರವಿಲ್ಲದೆ, ಮಾಸ್ಕ್ ಧರಿಸದೆ ವ್ಯಾಪಾರದಲ್ಲಿ ಬ್ಯುಸಿಯಾಗಿದ್ದು, ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದರೂ ಜನರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

ಕರಾವಳಿಯಲ್ಲಿ ಖಾಲಿಯಾಗಿರುವ ರಸ್ತೆಗಳು

ಇನ್ನು ಕಾರವಾರ ನಗರದಲ್ಲಿ ಬೆಳಿಗ್ಗೆಯಿಂದ ಬೆರಳೆಣಿಕೆಯ ಜನರು ಅಗತ್ಯ ಸಾಮಗ್ರಿಗಳನ್ನು ಖರೀದಿಸಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಕೆಲವೇ ಅಂಗಡಿಗಳು ತೆರೆದಿದ್ದು, ಉಳಿದ ಎಲ್ಲಾ ಅಂಗಡಿ-ಮುಂಗಟ್ಟು ಸಂಪೂರ್ಣ ಬಂದ್ ಆಗಿವೆ. ಹೂ, ತರಕಾರಿ, ಹಣ್ಣುಗಳ ಅಂಗಡಿಗಳ ವ್ಯಾಪಾರಸ್ಥರು ಗ್ರಾಹಕರಿಲ್ಲದೇ ಬೇಸತ್ತಿದ್ದಾರೆ. ಬೆಳಗ್ಗೆ 6.30ರಿಂದ ಅಂಗಡಿ ತೆರೆದು ಗ್ರಾಹಕರಿಗಾಗಿ ಕಾಯುತ್ತಿದ್ದೇವೆ. ಆದರೆ ಯಾವ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ. ನೀಡಿದ ಸಮಯದ ವರೆಗೂ ತರಕಾರಿ ಖರೀದಿಗೆ ಯಾವ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಿಗಳು ಬೇಸರದಿಂದ ಕುಳಿತಿದ್ದಾರೆ.

ವಾರಾಂತ್ಯದ ಕರ್ಫ್ಯೂ ಹಿನ್ನೆಲೆ ಕೊಡಗಿನಲ್ಲಿ ವಾಹನಗಳು ರಸ್ತೆಗಿಳಿಯದೆ ಮಡಿಕೇರಿಯ ರಸ್ತೆಗಳು ಸಂಪೂರ್ಣ ಖಾಲಿಯಾಗಿದೆ. ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ ದೊರೆತಿದ್ದು, ಜನರಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ.

ಇದನ್ನೂ ಓದಿ

ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕಿತರು; ತುಮಕೂರಿಗೆ ಎರಡನೇ ಸ್ಥಾನ

(Malnad people violated covid rules when purchasing items)