ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದ ಹಿನ್ನೆಲೆ; ಡಿಸೆಂಬರ್ನಿಂದ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ
ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು: ಮಕ್ಕಳಲ್ಲಿನ ಅಪೌಷ್ಟಿಕತೆ ವಿಚಾರ ಸರ್ಕಾರವನ್ನು ಆತಂಕಕ್ಕೆ ದೂಡಿದೆ. ಸತತ ಪ್ರಯತ್ನದ ಬಳಿಕವೂ ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆ, ಡಿಸೆಂಬರ್ ತಿಂಗಳಿನಿಂದ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ ಮಾಡಲಾಗಿದೆ. 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೀಗೆ ನಿರ್ಧಾರ ಕೈಗೊಳ್ಳಲಾಗಿದೆ.
ಕೆಲವು ಜಿಲ್ಲೆಗಳಲ್ಲಿ ಶೇಕಡಾ 70 ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ. 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ ಹಿನ್ನೆಲೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ನಿರ್ಧಾರ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.
ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಹಾಸನದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಇದನ್ನೂ ಓದಿ: ಇರುವಕ್ಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ; ಕಾಲ್ನಡಿಗೆ ಮೂಲಕ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು