ಚಿಂತಾಮಣಿ: ಶಾಸಕ ಎಂ.ಕೃಷ್ಣಾರೆಡ್ಡಿ ಕುಮ್ಮಕ್ಕಿನಿಂದ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿದ ಯುವಕ ಪೊಲೀಸ್ ಠಾಣೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಠಾಣೆಯ ಬಳಿ ನಡೆದಿದೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಯುವಕ ಕುಮಾರ್ ರೆಡ್ಡಿ ಅವರು ಕೃಷ್ಣಾರೆಡ್ಡಿ ಬೆಂಬಲಿಗರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.
ಇನ್ನು ಪೊಲೀಸರು ಕೂಡ ಸತ್ಯಾಂಶ ತಿಳಿಯದೆ ವಿನಾಕಾರಣ ನನ್ನ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಅರೋಪಿಸಿದ್ದಾನೆ. ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ, ನಗರ ಠಾಣೆ ಪಿಎಸ್ಐ ನಾರಾಯಣಸ್ವಾಮಿ, ಇನ್ಸ್‌ಪೆಕ್ಟರ್ ಜೆ.ಎನ್.ಆನಂದ ಮತ್ತು ನಗರಸಭೆ ಸದಸ್ಯ ಅಗ್ರಹಾರ ಮುರಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಚಿಂತಾಮಣಿ ನಗರಠಾಣೆ, ಗ್ರಾಮಾಂಗತರ ಠಾಣೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ್ ವಿರುದ್ಧ ರೌಡಿಶೀಟರ್ ಪ್ರಕರಣ ತೆರೆಯುವುದಕ್ಕೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಆತ್ಮಹತ್ಯೆಗೆ ಕುಮಾರ್ ರೆಡ್ಡಿ ಯತ್ನಿಸಿದ್ದಾನೆ. ಸದ್ಯ ಅಸ್ವಸ್ಥ ಕುಮಾರ್ ರೆಡ್ಡಿಯನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:
ಫೈನಲ್ನಲ್ಲಿ ಸೋಲು: ಆತ್ಮಹತ್ಯೆಗೆ ಶರಣಾದ ದಂಗಲ್ ಕುಸ್ತಿಪಟು ಗೀತಾ- ಬಬಿತಾ ಫೋಗಾಟ್ ಸೋದರಸಂಬಂಧಿ ರಿತಿಕಾ ಫೋಗಾಟ್