ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು

ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕ್​ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಬಿಹಾರ ಮೂಲದ ಸಿದ್ಧಾರ್ಥ್(30)​ ಆತ್ಮಹತ್ಯೆಗೆ ಯತ್ನಿಸಿದ್ದರು. ಮೆಟ್ರೋ ಸಿಬ್ಬಂದಿಗಳು ಸಮಯ ಪ್ರಜ್ಞೆಯಿಂದ ವ್ಯಕ್ತಿಯ ಪ್ರಾಣ ಉಳಿದಿದೆ.

ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು
ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Sep 17, 2024 | 4:25 PM

ಬೆಂಗಳೂರು, ಸೆಪ್ಟೆಂಬರ್​ 17: ನೇರಳೆ ಮಾರ್ಗದ ಮೆಟ್ರೋ (Metro) ಟ್ರ್ಯಾಕ್​​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 2.20ಕ್ಕೆ ನಡೆದಿದೆ. ಮೆಟ್ರೋ ಬರುತ್ತಿದ್ದಂತೆ ಬಿಹಾರ ಮೂಲದ ಸಿದ್ದಾರ್ಥ್ (30) ಎಂಬಾತ ಏಕಾಏಕಿ ಟ್ರ್ಯಾಕ್​ ಮೇಲೆ ಹಾರಿದ್ದಾರೆ.​ ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.

ವೈಟ್​​ಫೀಲ್ಡ್​ ಕಡೆಯಿಂದ ಕೆಂಗೇರಿ ಕಡೆಗೆ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಸಿದ್ದಾಥ್​ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೆಟ್ರೋ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದ್ದರು. ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಿ ಕರೆದುಕೊಂಡು ಹೋಗಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಸಿದ್ದಾರ್ಥ ನನ್ನು ಜ್ಞಾನಭಾರತಿ ಸ್ಟೇಷನ್ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಟ್ರ್ಯಾಕ್​ಗೆ ಹಾರಿದ ಯುವಕ

ಘಟನೆ ಹಿನ್ನಲೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ಕೆಲ ನಿಮಿಷ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, 2:30 ಗಂಟೆಗೆ ಸೇವೆ ಪುನರಾರಂಭಿಸಲಾಯಿತು. ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬದಲು ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ 2 ರೈಲುಗಳು ಶಾರ್ಟ್ ಲೂಪ್‌ನಲ್ಲಿ ಕಾರ್ಯನಿರ್ವಹಿಸಿದವು ಎಂದು ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಇನ್ನು ಇತ್ತೀಚೆಗೆ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಹಾರಿ 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ನವೀನ್ ಅರೋರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿತ್ತು. ನವೀನ್ ಅರೋರಗೆ ಪುತ್ರ, ಪುತ್ರಿ ಹಾಗೂ ಪತ್ನಿ ಇದ್ದಾರೆ. ಪುತ್ರ ಸ್ವಂತ ಬಟ್ಟೆ ಅಂಗಡಿ ಹೊಂದಿದ್ದರು. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾಳೆ. ಕುಟುಂಬಸ್ಥರು ಬಿಳೆಕಹಳ್ಳಿ ದಿವ್ಯಾ ಪಂಚಮಿ ಅಪಾರ್ಟ್ಮೆಂಟ್​​ನಲ್ಲಿ ವಾಸವಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:00 pm, Tue, 17 September 24

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ