ಬೆಂಗಳೂರು, ಸೆಪ್ಟೆಂಬರ್ 17: ನೇರಳೆ ಮಾರ್ಗದ ಮೆಟ್ರೋ (Metro) ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 2.20ಕ್ಕೆ ನಡೆದಿದೆ. ಮೆಟ್ರೋ ಬರುತ್ತಿದ್ದಂತೆ ಬಿಹಾರ ಮೂಲದ ಸಿದ್ದಾರ್ಥ್ (30) ಎಂಬಾತ ಏಕಾಏಕಿ ಟ್ರ್ಯಾಕ್ ಮೇಲೆ ಹಾರಿದ್ದಾರೆ. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.
ವೈಟ್ಫೀಲ್ಡ್ ಕಡೆಯಿಂದ ಕೆಂಗೇರಿ ಕಡೆಗೆ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಸಿದ್ದಾಥ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೆಟ್ರೋ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದ್ದರು. ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಿ ಕರೆದುಕೊಂಡು ಹೋಗಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ
ಯಾವುದೇ ಗಾಯಗಳು ವರದಿಯಾಗಿಲ್ಲ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಸಿದ್ದಾರ್ಥ ನನ್ನು ಜ್ಞಾನಭಾರತಿ ಸ್ಟೇಷನ್ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಟ್ರ್ಯಾಕ್ಗೆ ಹಾರಿದ ಯುವಕ
ಘಟನೆ ಹಿನ್ನಲೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ಕೆಲ ನಿಮಿಷ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, 2:30 ಗಂಟೆಗೆ ಸೇವೆ ಪುನರಾರಂಭಿಸಲಾಯಿತು. ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬದಲು ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ 2 ರೈಲುಗಳು ಶಾರ್ಟ್ ಲೂಪ್‌ನಲ್ಲಿ ಕಾರ್ಯನಿರ್ವಹಿಸಿದವು ಎಂದು ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೋ ಟ್ರ್ಯಾಕ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಇನ್ನು ಇತ್ತೀಚೆಗೆ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಹಾರಿ 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ನವೀನ್ ಅರೋರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿತ್ತು. ನವೀನ್ ಅರೋರಗೆ ಪುತ್ರ, ಪುತ್ರಿ ಹಾಗೂ ಪತ್ನಿ ಇದ್ದಾರೆ. ಪುತ್ರ ಸ್ವಂತ ಬಟ್ಟೆ ಅಂಗಡಿ ಹೊಂದಿದ್ದರು. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾಳೆ. ಕುಟುಂಬಸ್ಥರು ಬಿಳೆಕಹಳ್ಳಿ ದಿವ್ಯಾ ಪಂಚಮಿ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:00 pm, Tue, 17 September 24