Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಿಲಿಗೆ ಬೀಗ ಹಾಕಿ, ಬೆಂಕಿಯಿಟ್ಟು ಏಳು ಜನರನ್ನು ಕೊಂದ‌ ವ್ಯಕ್ತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಆರು ಜನರನ್ನ ಬೆಂಕಿ ಹಚ್ಚಿ ಅಮಾನುಷವಾಗಿ ಕೊಂದ ಬಳಿಕ ಆರೋಪಿ ಬೋಜ ತನ್ನ ಮಗಳಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗಿದೆ. ರಾತ್ರಿ ತನ್ನ ಪತ್ನಿ ಮಲಗಿದ್ದ ಅಳಿಯನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆತ ರಾತ್ರಿಯೇ ಮಗಳು ಸುಜಾಳಿಗೆ ಕರೆ ಮಾಡಿದ್ದಾನೆ.

ಬಾಗಿಲಿಗೆ ಬೀಗ ಹಾಕಿ, ಬೆಂಕಿಯಿಟ್ಟು ಏಳು ಜನರನ್ನು ಕೊಂದ‌ ವ್ಯಕ್ತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಎರವರ ಬೋಜ
Follow us
preethi shettigar
| Updated By: Skanda

Updated on: Apr 06, 2021 | 12:06 PM

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಾಕೂರು ಸಮೀಪದ ಮುಗುಟಕೇರಿ ಗ್ರಾಮದಲ್ಲಿ ಮೊನ್ನೆ ಏಪ್ರಿಲ್ 3ಕ್ಕೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆರು ಜನರನ್ನು ಕೊಲೆ ಮಾಡಿದ್ದ ಆರೋಪಿ ಎರವರ ಬೋಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಕೂರು ನರೇಶ್ ಎಂಬುವರ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಬೋಜನ ಮೃತ ದೇಹ ಪತ್ತೆಯಾಗಿದೆ. ಘಟನೆ ಬಳಿಕ ಈತ ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಳಿಯನ‌ ಮನೆಯಲ್ಲಿ ಮಲಗಿದ್ದ ತನ್ನ ಪತ್ನಿ ಮತ್ತು ಇತರ ಐವರನ್ನು ಪೆಟ್ರೋಲ್ ಸುರಿದು ಈತ ಬರ್ಬರವಾಗಿ ಕೊಂದಿದ್ದ. ಘಟನೆ ಬಳಿಕ ಬೋಜ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಕೊಡಗು ಪೊಲೀಸ್ ಕಾರ್ಯಾಚರಣೆ ನಡೆಸಿತ್ತು. ಇದರ ಮಧ್ಯೆಯೇ ಬೋಜನ ದೇಹ ಪತ್ತೆಯಾಗಿದೆ. ದೇಹ ಕೊಳೆತ ಸ್ಥಿತಿಯಲ್ಲಿದ್ದು ಘಟನೆ ನಡೆದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ.

ಕೊಲೆ‌ಪಾತಕಿಯ ಲಾಸ್ಟ್ ಆಡಿಯೋ ಕಾಲ್ ವೈರಲ್ ಆರು ಜನರನ್ನ ಬೆಂಕಿ ಹಚ್ಚಿ ಅಮಾನುಷವಾಗಿ ಕೊಂದ ಬಳಿಕ ಆರೋಪಿ ಬೋಜ ತನ್ನ ಮಗಳಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗಿದೆ. ರಾತ್ರಿ ತನ್ನ ಪತ್ನಿ ಮಲಗಿದ್ದ ಅಳಿಯನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆತ ರಾತ್ರಿಯೇ ಮಗಳು ಸುಜಾಳಿಗೆ ಕರೆ ಮಾಡಿದ್ದಾನೆ. ” ನಿನ್ನ ಅಮ್ಮ ಎರಡು ವಾರ ಕರೆದರೂ ಬಂದಿಲ್ಲ, ಅದಕ್ಕೆ ಅವಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದೇನೆ, ಈಗ ಅವಳ ಗೋಳಾಟ ನೋಡು ಹೋಗು” ಎಂದು ಹೇಳಿದ್ದಾನೆ. ಈ ಆಡಿಯೋ ಇದೀಗ ಸಾಮಾಜಿಕ‌ ಜಾಲ‌ತಾಣದಲ್ಲಿ ವೈರಲ್ ಆಗಿದೆ.

ಮತ್ತೋರ್ವ ಗಾಯಾಳು ಸಾವು, ಏಳಕ್ಕೇರಿದ ಸಾವಿನ‌ಸಂಖ್ಯೆ ಜೀವಂತ ದಹನ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಭಾಗ್ಯ(40) ಮತ್ತು ಪಾಚೆ(60) ಎಂಬುವವರನ್ನು ಮೈಸೂರಿನ‌ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ ಭಾಗ್ಯ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಇಬ್ಬರು ಮಕ್ಕಳು ಘಟನೆ ನಡೆದ ದಿನವೇ ಸಾವನ್ನಪ್ಪಿದ್ದರು. ಇದೀಗ ಪತ್ನಿ‌ ಮತ್ತು ಇಬ್ಬರು ಮಕ್ಕಳನ್ನು ಕಳೆದುಕೊಂಡು‌ ಅನಾಥವಾಗಿರುವ ಪತಿ ತೋಲನ ಗೋಳು ಮುಗಿಲು ಮುಟ್ಟಿದೆ.

ಇದನ್ನೂ ಓದಿ:

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ

ಆಸ್ಪತ್ರೆಗೆ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದರೂ.. ರೋಗಿಯನ್ನು ಬಿಟ್ಟು ಹೊರ ಬಾರದ ವೈದ್ಯರು; ಜೀವವನ್ನೇ ಪಣಕ್ಕಿಟ್ಟು ಸರ್ಜರಿ ನಡೆಸಿದರು

(Man Committed suicide after he killed 7 people in Kodagu

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ