ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ

ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲೂ ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ಬೆಂಗಳೂರು: ಅಂತ್ಯಕ್ರಿಯೆಯಿಂದಲೂ‌ ದೂರ ಉಳಿದ ಕುಟುಂಬಸ್ಥರು; 3 ದಿನದಿಂದ ಆಸ್ಪತ್ರೆಯಲ್ಲೇ ಮೃತದೇಹ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 16, 2021 | 1:47 PM

ಬೆಂಗಳೂರು: ಕೊರೊನಾ ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದು ಜನರಿಗೆ ಆತಂಕ ಸೃಷ್ಟಿಸುತ್ತಿದೆ. ಕೊವಿಡ್​ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್​​ ಚಾಲಕ ಮೃತದೇಹದ ಅಂತ್ಯಕ್ರಿಯೆ ನಡೆಸಿದ್ದಾರೆ.

ರಾಜನ್ ಕುಮಾರ್ (28) ಎಂಬುವವರಿಗೆ ಕೊವಿಡ್​ ಸೋಂಕು ತಗುಲಿದ್ದ ಕಾರಣ ಯಲಹಂಕ ಚೈತನ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ರಾಜನ್​ ಕುಮಾರ್​ ಸಾವಿಗೀಡಾಗಿದ್ದಾರೆ. ವಿಷಯ ತಿಳಿಸಲು ಕುಟುಂಬಸ್ಥರಿಗೆ ಕರೆ ಮಾಡಿದರೆ ನಾಟ್​ ರೀಚೆಬಲ್​ ಬರುತ್ತಿದೆ. 3 ದಿನಗಳಾದರೂ ಕುಟುಂಬಸ್ಥರು ಮತ್ತು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಂಬ್ಯಲೆನ್ಸ್​ ಚಾಲಕ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಲಕ್ಷ್ಮೀಪುರದ ಮೇಡಿ ಅಗ್ರಹಾರ ಚಿತಾಗಾರದಲ್ಲಿ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿದೆ.

ಮೃತ ವ್ಯಕ್ತಿಯ ಕುಟುಂಬಸ್ಥರು ಯಾರು? ಎಲ್ಲಿಯವರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಆಸ್ಪತ್ರೆಯ ಬಿಲ್ ಕಟ್ಟಲಾಗದೆಯೇ ಶವ ಬಿಟ್ಟು ಹೋದ್ರಾ ಅಥವಾ ಕೊರೊನಾ ಭಯಕ್ಕೆ ಅಂತ್ಯಸಂಸ್ಕಾರದಿಂದ ದೂರ ಉಳಿದ್ರಾ ಎನ್ನುವ ಪ್ರಶ್ನೆ ಎದುರಾಗಿದೆ.

10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ ಕೊವಿಡ್​ನಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್​ ಸಮಸ್ಯೆ ಉಂಟಾಗುತ್ತಿದೆ. 10 ದಿನದಿಂದ ಕಾಲ್ ಮಾಡಿದ್ರೂ ಒಂದೇ ಒಂದು ಬೆಡ್ ಸಿಗಲಿಲ್ಲ. ಅಷ್ಟೂ ದಿನ ಖಾಸಗಿ ಆಸ್ಪತ್ರೆಯಲ್ಲೇ ಇರಬೇಕಾಯಿತು. ಆದರೂ ಜೀವ ಉಳಿಯಲಿಲ್ಲ ಎಂದು ಕೂಡ್ಲು ಚಿತಗಾರದಲ್ಲಿ ಮೃತ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ