ಹಾಸನ: ಸ್ಫೋಟಕ ಸಂಗ್ರಹಿಸಿದ್ದ ಗೋದಾಮಿನಲ್ಲಿ ಸ್ಪೋಟ, ಓರ್ವ ಸಾವು
ಕಲ್ಲು ಗಣಿಗಾರಿಕೆಗಾಗಿ ಸ್ಫೋಟಕವನ್ನು ಸಂಗ್ರಹಿಸಿದ್ದರು. ಇಂದು (ಏಪ್ರಿಲ್ 4) ಸ್ಫೋಟಕ ವಿತರಣೆ ವೇಳೆ ಸ್ಪೋಟವಾಗಿದ್ದು, ಸ್ಪೋಟದ ತೀವ್ರತೆಗೆ ಚಾಕೇನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಪ್ರಕರಣ ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನ: ಸ್ಫೋಟಕವನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಪೋಟವಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಘಟನೆ ಹಾಸನ ತಾಲೂಕಿನ ಚಾಕೇನಹಳ್ಳಿಯಲ್ಲಿ ಸಂಭವಿಸಿದೆ. ಸ್ಪೋಟದಿಂದ 27 ವರ್ಷದ ಸಂಪತ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಓರ್ವನಿಗೆ ಹಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಗಾಯಾಳು ವ್ಯಕ್ತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಲ್ಲು ಗಣಿಗಾರಿಕೆಗಾಗಿ ಸ್ಫೋಟಕವನ್ನು ಸಂಗ್ರಹಿಸಿದ್ದರು. ಇಂದು (ಏಪ್ರಿಲ್ 4) ಸ್ಫೋಟಕ ವಿತರಣೆ ವೇಳೆ ಸ್ಪೋಟವಾಗಿದ್ದು, ಸ್ಪೋಟದ ತೀವ್ರತೆಗೆ ಚಾಕೇನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಪ್ರಕರಣ ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಫೋಟ ನಡೆದ ಸ್ಥಳಕ್ಕೆ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಸ್ಫೋಟ ಸಂಭವಿಸಿರುವ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದ ಐಜಿಪಿ ಪವಾರ್ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.
ಗೋದಾಮಿನಲ್ಲಿನ ಸ್ಫೋಟಕ್ಕೆ ಅಧಿಕಾರಿಗಳ ವೈಫಲ್ಯವೇ ಕಾರಣ ಎಂದು ಹಾಸನದಲ್ಲಿ ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪ ವ್ಯಕ್ತಪಡಿಸಿದ್ದಾರೆ. ತಿಂಗಳ ಹಿಂದೆಯೇ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಈ ಬಗ್ಗೆ ಡಿಸಿ, SPಗೆ ದೂರು ನೀಡಿದ್ದರೂ ಕ್ರಮಕೈಗೊಂಡಿಲ್ಲ. ಈ ಸ್ಫೋಟ ಪ್ರಕರಣದ ಕುರಿತು ಸೂಕ್ತ ತನಿಖೆಯಾಗಬೇಕು. ಕೂಡಲೇ ಅವರ ಲೈಸೆನ್ಸ್ ರದ್ದುಪಡಿಸಿ, ತನಿಖೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಒತ್ತಾಯಿಸಿದ್ದಾರೆ.
ಮಹಿಳೆಯ ಮೃತದೇಹ ಪತ್ತೆ ಕೋಲಾರದ ವೇಣುಗೋಪಾಲಸ್ವಾಮಿ ದೇಗುಲದ ಕಲ್ಯಾಣಿಯಲ್ಲಿ 50 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಗಾಂಧಿನಗರ ಬಡಾವಣೆ ನಿವಾಸಿ ವರಲಕ್ಷ್ಮಮ್ಮ(50) ಎಂದು ತಿಳಿದುಬಂದಿದೆ. ಶವವನ್ನು ಕಲ್ಯಾಣಿಯಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ.
ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಡ್ಲೂರು ಬಳಿ ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಗೋವಾದಿಂದ ಹುಬ್ಬಳ್ಳಿಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ರಸ್ತೆಯಿಂದ ಬಿದ್ದಿದ್ದ ಮದ್ಯವನ್ನು ಸ್ಥಳೀಯ ನಿವಾಸಿಗಳು ಹೊತ್ತೊಯ್ದಿದ್ದಾರೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
(Man death in explosion gowdan blast at hassan)
ಇದನ್ನೂ ಓದಿ
ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ಕಾರ ಬದ್ಧ; ಗೃಹ ಸಚಿವ ಬಸವರಾಜ ಬೊಮ್ಮಾಯಿ
Published On - 6:43 pm, Sun, 4 April 21