ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಪ್ರಕರಣ ಹಾನಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ
preethi shettigar

| Edited By: Lakshmi Hegde

Dec 20, 2020 | 6:06 PM

ಹಾವೇರಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್​ನ ಗರಡಿಮನೆ ಕ್ರಾಸ್​ನಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ನಡೆದ ಈ ಅಪಘಾತದಲ್ಲಿ ಕಾರವಾರ ಜಿಲ್ಲೆ ಶಿರಸಿ ತಾಲೂಕಿನ ಅಂಡಗಿ ಗ್ರಾಮದ ನಿವಾಸಿ ಗಣಪತಿ ಲಮಾಣಿ (22) ಮೃತಪಟ್ಟಿದ್ದು, ಹಾನಗಲ್ ಪಟ್ಟಣದಿಂದ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ಸಂಬಂಧ ಪ್ರಕರಣ ಹಾನಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪತ್ನಿ ಸ್ಥಳದಲ್ಲೇ ದುರ್ಮರಣ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada