ಹಾವೇರಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ನ ಗರಡಿಮನೆ ಕ್ರಾಸ್ನಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ನಡೆದ ಈ ಅಪಘಾತದಲ್ಲಿ ಕಾರವಾರ ಜಿಲ್ಲೆ ಶಿರಸಿ ತಾಲೂಕಿನ ಅಂಡಗಿ ಗ್ರಾಮದ ನಿವಾಸಿ ಗಣಪತಿ ಲಮಾಣಿ (22) ಮೃತಪಟ್ಟಿದ್ದು, ಹಾನಗಲ್ ಪಟ್ಟಣದಿಂದ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ಸಂಬಂಧ ಪ್ರಕರಣ ಹಾನಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.