ಮೂಗಿನಲ್ಲಿ ನಿಂಬೆರಸ ಹಾಕಿಕೊಂಡ ಆರೋಗ್ಯವಾಗಿದ್ದ ವ್ಯಕ್ತಿ ಸಾವು

ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ಮನೆಯವರು ಹೇಳಿದ್ದಾರೆ. ಬೆಳಗ್ಗೆ ಇವರು ಆರೋಗ್ಯವಾಗಿಯೇ ಇದ್ದರು. ಆದರೆ ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮೂಗಿನಲ್ಲಿ ನಿಂಬೆರಸ ಹಾಕಿಕೊಂಡ ಆರೋಗ್ಯವಾಗಿದ್ದ ವ್ಯಕ್ತಿ ಸಾವು
ಮೃತ ಶಿಕ್ಷಕ ಬಸವರಾಜ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 28, 2021 | 5:15 PM

ರಾಯಚೂರು: ಆರೋಗ್ಯವಾಗಿದ್ದ ವ್ಯಕ್ತಿಯೊಬ್ಬರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡು ಮೃತಪಟ್ಟ ಘಟನೆ ಸಿಂಧನೂರಿನ ನಟರಾಜ ಕಾಲೋನಿಯಲ್ಲಿ ಬುಧವಾರ ನಡೆದಿದೆ. ನಗರದ ಶರಣಬಸವೇಶ್ವರ ಕಾಲೋ‌ನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಸವರಾಜ (43) ಮೃತರು. ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ಮನೆಯವರು ಹೇಳಿದ್ದಾರೆ. ಬೆಳಗ್ಗೆ ಇವರು ಆರೋಗ್ಯವಾಗಿಯೇ ಇದ್ದರು. ಆದರೆ ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಯಿ ಕಳೆದುಕೊಂಡ ಮಗನ ಕಣ್ಣೀರು ಬೆಂಗಳೂರು: ಕೊರೊನಾ ಸೋಂಕಿನಿಂದ ಅಮ್ಮನನ್ನು ಕಳೆದುಕೊಂಡ ದುಃಖತಪ್ತ ಮಗನೊಬ್ಬನ ಕಣ್ಣೀರ ಎಲ್ಲರ ಕರ್ಣಣಾಲಿಗಳನ್ನು ಒದ್ದೆಯಾಗಿಸಿತು. ಬೆಂಗಳೂರಿನ ಸುಮನಹಳ್ಳಿ ಚಿತಾಗಾರ ಬಳಿ ಈ ಮನಕಲಕುವ ದೃಶ್ಯ ಕಂಡುಬಂತು. ಆಟೋ ಓಡಿಸಿಕೊಂಡು ಅಮ್ಮನನ್ನು ಸಾಕುತ್ತಿದ್ದ ಪುತ್ರ ಇದೀಗ ತನ್ನ ಏಕೈಕ ಆಸರೆಯನ್ನು ಕಳೆದುಕೊಂಡು ಮುಂದೇನು ಎಂದು ತೋಚದೇ ಕಣ್ಣೀರು ಹರಿಸುತ್ತಿದ್ದಾನೆ. ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿದಾಗ ಇವರ ತಾಯಿಗೆ ಕೊವಿಡ್ ಪತ್ತೆಯಾಗಿತ್ತು.

‘ನಮ್ಮ ತಾಯಿಗೆ ಯಾವ ಆಸ್ಪತ್ರೆಯಲ್ಲೂ ಬೆಡ್‌ ಸಿಗಲಿಲ್ಲ. ಉಸಿರಾಟದ ಸಮಸ್ಯೆ ಸಹ ಕಾಣಿಸಿತ್ತು. ಮನೆಗೆ ಕರೆತಂದ ನಂತರ ಒಂದೇ ಗಂಟೆಯಲ್ಲಿ ಮೃತಪಟ್ಟಿದ್ದಾರೆ. ಪರಿಚಯಸ್ಥರ ಮೂಲಕ ಚಿತಾಗಾರಕ್ಕೆ ತಾಯಿ ಶವ ತಂದಿದ್ದೇನೆ. ಸಂಬಂಧಿಕರೆಲ್ಲರೂ ಊರಿನಲ್ಲಿದ್ದಾರೆ. ಇಲ್ಲಿ ಯಾರೂ ಇಲ್ಲ. ತಾಯಿ ಕಳೆದುಕೊಂಡ ನಾನೀಗ ಒಂಟಿಯಾಗಿದ್ದೇನೆ’ ಎಂದು ಯುವಕ ಕಣ್ಣೀರಿಟ್ಟ.

ಕೊರೊನಾ ಸೋಂಕಿಗೆ ದಂಪತಿ ಸಾವು ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಕೆರೆಗೋಡಿ ಗ್ರಾಮದ ದಂಪತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಪತಿ ತಿಪಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ರವಾನಿಸುವಾಗ ಆ್ಯಂಬುಲೆನ್ಸ್​ನಲ್ಲಿಯೇ ಸೋಂಕಿತ ಪತ ಸಾವನ್ನಪ್ಪಿದ್ದಾರೆ. ಪತಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತ್ನಿಯೂ ಮೃತಪಟ್ಟರು. ಪತ್ನಿ ಮನೆಯಲ್ಲಿಯೇ ಐಸೋಲೇಟ್ ಆಗಿದ್ದರು.

ಸೂಕ್ತ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತ ಸಾವು: ಆರೋಪ ಧಾರವಾಡ: ಸೂಕ್ತ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತ ಸಾವನ್ನಪ್ಪಿದ್ದಾನೆ ಎಂದು ಧಾರವಾಡದಲ್ಲಿ ಎಐಸಿಸಿ ಸದಸ್ಯ ದೀಪಕ್ ಚಿಂಚೋರಿ ಆರೋಪ ಮಾಡಿದ್ದಾರೆ. ಜಿಲ್ಲಾಸ್ಪತ್ರೆ, ಹುಬ್ಬಳ್ಳಿ ಕಿಮ್ಸ್​ನಲ್ಲಿ ವೆಂಟಿಲೇಟರ್ ಸಿಗುತ್ತಿಲ್ಲ. ಆಕ್ಸಿಜನ್, ವೆಂಟಿಲೇಟರ್ ಸಿಗದೆ ಸೋಂಕಿತರು ಸಾಯುತ್ತಿದ್ದಾರೆ ಎಂದು ಧಾರವಾಡದಲ್ಲಿ ಎಐಸಿಸಿ ಸದಸ್ಯ ದೀಪಕ್ ಚಿಂಚೋರಿ ಆರೋಪ ಮಾಡಿದ್ದಾರೆ.

(Man dies After taking drops of lemon in nose)

Published On - 5:13 pm, Wed, 28 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ