ಬೋರ್ವೆಲ್ ಲಾರಿಗೆ ಬೈಕ್ ಡಿಕ್ಕಿ: ಲಾರಿಯಡಿ ಸಿಲುಕಿದ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಟ
ಬೋರ್ವೆಲ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಯಂತ್ರದಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವು ಬದುಕಿನ ನಡುವೆ ಒದ್ದಾಡುತ್ತಿರುವ ಘಟನೆ ಜಿಲ್ಲೆಯ ಬಸವಣಕುಡಚಿ ಗ್ರಾಮದ ಬಳಿ ನಡೆದಿದೆ.
ಬೆಳಗಾವಿ: ಬೋರ್ವೆಲ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಯಂತ್ರದಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಸಾವು ಬದುಕಿನ ನಡುವೆ ಒದ್ದಾಡುತ್ತಿರುವ ಘಟನೆ ಜಿಲ್ಲೆಯ ಬಸವಣಕುಡಚಿ ಗ್ರಾಮದ ಬಳಿ ನಡೆದಿದೆ. ಯಂತ್ರದಡಿ ಸಿಲುಕಿದವನನ್ನ ರಕ್ಷಿಸಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.
ಅಪಘಾತದ ರಭಸಕ್ಕೆ ಬೋರ್ವೆಲ್ ಲಾರಿ ಪಲ್ಟಿಯಾಗಿದೆ. ಈ ವೇಳೆ, ಲಾರಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ವಾಹನದಡಿ ಸಿಲುಕಿದ್ದಾನೆ. ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿರುವ ವ್ಯಕ್ತಿಯನ್ನು ರಕ್ಷಿಸಲು JCB ಮೂಲಕ ಲಾರಿಯನ್ನು ಎತ್ತಲು ಸ್ಥಳೀಯರು ಪ್ರಯತ್ನಿಸುತ್ತಿದ್ದಾರೆ.
Published On - 5:09 pm, Sat, 28 November 20