AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಆಟೋದಲ್ಲೇ ಪ್ರಾಣ ಬಿಟ್ಟ ನಾನ್ ಕೊವಿಡ್ ವ್ಯಕ್ತಿ

ಶ್ರೀಕಾಂತ್ ಎಂಬುವವರು ಮೈಸೂರು ಜಿಲ್ಲೆ ಕೆಆರ್ ನಗರ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ. ಇವರಿಗೆ 34 ವರ್ಷ. ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದರು. ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಜಾರಿ ಕೆಳಗೆ ಬಿದ್ದಿದ್ದರು. ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿತ್ತು.

ಮೈಸೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಆಟೋದಲ್ಲೇ ಪ್ರಾಣ ಬಿಟ್ಟ ನಾನ್ ಕೊವಿಡ್ ವ್ಯಕ್ತಿ
ಮೃತ ವ್ಯಕ್ತಿ ಶ್ರೀಕಾಂತ್
sandhya thejappa
|

Updated on: May 09, 2021 | 10:23 AM

Share

ಮೈಸೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಸೋಂಕಿತರಿಗೆ ಸೂಕ್ತ ಸಿಕಿತ್ಸೆ ಸಿಗುತ್ತಿಲ್ಲ. ಜೊತೆಗೆ ಆಕ್ಸಿಜನ್ ಕೊರತೆಯೂ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಕೊರೊನಾ ಸೋಂಕಿತರು ಮತ್ತು ನಾನ್ ಕೊವಿಡ್ ರೋಗಿಗಳು ಪ್ರಾಣ ಬಿಡುತ್ತಿದ್ದಾರೆ. ಇಂತಹದೊಂದು ಘಟನೆ ಇಂದು (ಮೇ 9) ಮೈಸೂರಿನಲ್ಲಿ ನಡೆದಿದೆ. ನಾನ್ ಕೊವಿಡ್ ವ್ಯಕ್ತಿಯೊಬ್ಬರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಆಟೋದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಶ್ರೀಕಾಂತ್ ಎಂಬುವವರು ಮೈಸೂರು ಜಿಲ್ಲೆ ಕೆಆರ್ ನಗರ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ. ಇವರಿಗೆ 34 ವರ್ಷ. ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದರು. ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಜಾರಿ ಕೆಳಗೆ ಬಿದ್ದಿದ್ದರು. ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿತ್ತು. ಕೊವಿಡ್ ಕಾರಣ ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆ ಸಿಗದ ಹಿನ್ನೆಲೆ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಕೊನೆಗೆ ಆಟೋದಲ್ಲೇ ಪ್ರಾಣ ಬಿಟ್ಟಿದ್ದಾರೆ. ವೆಂಟಿಲೇಟರ್ ಸಿಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು ಶಿವಮೊಗ್ಗ: ಕೊರೊನಾ ದೃಢಪಟ್ಟ ವ್ಯಕ್ತಿ ವೆಂಟಿಲೇಟರ್ ಸಿಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಿಕಾರಿಪುರದ 45 ವರ್ಷದ ಆನಂದ್ ಎಂಬುವವರು ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ನಿನ್ನೆ (ಮೇ 8) ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಸರಿಯಾದ ಪ್ರಯಾಣದ ಆಕ್ಸಿಜನ್ ಸಿಗದೇ ರೋಗಿ ಸಾವನ್ನಪ್ಪಿದ್ದಾರೆ. ಐಸಿಯು ವಾರ್ಡ್​ಗೆ ದಾಖಲಿಸಿದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬಿದ ಬೀದರ್​ ಜಿಲ್ಲಾಸ್ಪತ್ರೆಯ ವೈದ್ಯರು

Sri Murali: ಕೊವಿಡ್​ ಸಂಕಷ್ಟದಲ್ಲಿ 5 ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಊಟ ನೀಡುತ್ತಿರುವ ನಟ ಶ್ರೀಮುರಳಿ

(man has died in auto without getting a bed at hospital in mysuru)