ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಆಲೂರು ತಾಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ನಡೆದಿದೆ. ಕ್ಯಾತನಹಳ್ಳಿ ನಿವಾಸಿ ಪ್ರಧಾನ್ (35) ಮೃತ.
ಎಂದಿನಂತೆ ಇಂದು ಮುಂಜಾನೆಯೇ ಪ್ರಧಾನ್ ಜಮೀನಿಗೆ ತೆರಳಿ, ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ಮಾಡಿದೆ. ಇನ್ನು ಕಾಡಾನೆಗಳ ಹಾವಳಿಯ ಬಗ್ಗೆ ಈಗಾಗಲೇ ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರೂ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ..ಈಗ ಒಂದು ಜೀವವೇ ಹೋಯ್ತು ಎಂದು ಕುಟುಂಬಸ್ಥರು ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 10:46 am, Sat, 19 December 20