ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ

ಕೊಡಗು ಜಿಲ್ಲೆ ವಿರಾಜಪೇಟೆ ಮೂಲದ ರಾಜನ್(45) ಕಾಡನೆ ದಾಳಿಯಿಂದ ಮೃತಪಟ್ಟಿದ್ದು, ಪಿ.ಎಫ್.ಸಾಲ್ಡಾನ ಅವರ ತೋಟದಲ್ಲಿ ಮೆಣಸು ಕಾಯುವ ಕೆಲಸ ಮಾಡುತ್ತಿದ್ದ ರಾಜನ್ ಎಂದಿನಂತೆ ಇಂದು ಬೆಳಿಗ್ಗೆ ತೋಟದಲ್ಲಿ ಮೆಣಸು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿ‌ ನಡೆಸಿದ್ದು, ರಾಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ
ಸಾಂದರ್ಭಿಕ ಚಿತ್ರ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 03, 2021 | 4:00 PM

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊರ್ವ ಬಲಿಯಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೊಡ್ಡಲಕ್ಕುಂದ ಗ್ರಾಮದ ಬಳಿ ನಡೆದಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ಮೂಲದ ರಾಜನ್ (45) ಕಾಡನೆ ದಾಳಿಯಿಂದ ಮೃತಪಟ್ಟಿದ್ದು, ಪಿ.ಎಫ್.ಸಾಲ್ಡಾನ ಅವರ ತೋಟದಲ್ಲಿ ರಾಜನ್ ಮೆಣಸು ಕಾಯುವ ಕೆಲಸ ಮಾಡುತ್ತಿದ್ದರು. ತೋಟದಲ್ಲಿ ಮೆಣಸು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿ‌ ನಡೆಸಿದ್ದು, ರಾಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಇದೆ ಮೊದಲೇನಲ್ಲ ಈ ಹಿಂದೆ ಅಂದರೆ ಡಿಸೆಂಬರ್ 19 ರಂದು ಆಲೂರು ತಾಲ್ಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಕ್ಯಾತನಹಳ್ಳಿಯ ಪ್ರಧಾನ್ (35) ಎಂಬ ವ್ಯಕ್ತಿ ಮೃತಪಟ್ಟಿದ್ದರು. ಹಾಸನ ಜಿಲ್ಲೆಯಲ್ಲಿ 15 ದಿನಗಳ ಅಂತರದಲ್ಲಿ ಪುನಃ ಕಾಡಾನೆ ದಾಳಿ ನಡೆದಿದ್ದು, ಕಾಡಾನೆಗಳ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ: ಮನೆಯಲ್ಲಿದ್ದ ವೃದ್ಧ ಸಾವು, ಎರಡು ಮನೆಗಳು ಜಖಂ..