ಮೈಸೂರಿನಲ್ಲಿ ಭೀಕರ ಘಟನೆ; ತಾಯಿ, ಪತ್ನಿ, ಮಕ್ಕಳಿಬ್ಬರನ್ನು ಬರ್ಬರವಾಗಿ ಕೊಲೆಗೈದ ವ್ಯಕ್ತಿ

ಮಣಿಕಂಠ ಎಂಬ ವ್ಯಕ್ತಿ ತನ್ನ ಇಡೀ ಕುಟುಂಬವನ್ನೇ ಕೊಲೆ ಮಾಡಿದ್ದಾನೆ. ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರನ್ನೂ ಹತ್ಯೆಗೈದಿದ್ದಾನೆ. ಸ್ಥಳಕ್ಕೆ ಸರಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಭೀಕರ ಘಟನೆ; ತಾಯಿ, ಪತ್ನಿ, ಮಕ್ಕಳಿಬ್ಬರನ್ನು ಬರ್ಬರವಾಗಿ ಕೊಲೆಗೈದ ವ್ಯಕ್ತಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು

Updated on: Apr 29, 2021 | 10:12 AM

ಮೈಸೂರು: ತಾಯಿ, ಪತ್ನಿ, ಮಕ್ಕಳಿಬ್ಬರನ್ನು ವ್ಯಕ್ತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಈ ಭೀಕರ ಘಟನೆಗೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ತಾಯಿ ಕೆಂಪಮ್ಮ(65), ಪತ್ನಿ ಗಂಗಾ(28), ಮಕ್ಕಳಾದ ಸಾಮ್ರಾಟ್(2), ರೋಹಿತ್(1) ಬರ್ಬರವಾಗಿ ಕೊಲೆಯಾದವರು.

ಮಣಿಕಂಠ ಎಂಬ ವ್ಯಕ್ತಿ ತನ್ನ ಇಡೀ ಕುಟುಂಬವನ್ನೇ ಕೊಲೆ ಮಾಡಿದ್ದಾನೆ. ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರನ್ನೂ ಹತ್ಯೆಗೈದಿದ್ದಾನೆ. ಸ್ಥಳಕ್ಕೆ ಸರಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸರಣಿ ಅಪಘಾತ, ಮೂವರ ಸಾವು
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ್ ಕ್ರಾಸ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಹಿಂಬದಿಯಿಂದ ಲಾರಿ ಗುದ್ದಿದ್ರಿಂದ ನಿಯಂತ್ರಣ ತಪ್ಪಿದ ಕಾರು
ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಶಾಂತವ್ವ, ಲಕ್ಷ್ಮೀ, ದುಂಡವ್ವ ಉಳ್ಳಾಗಡ್ಡಿ ಮೃತ ದುರ್ದೈವಿಗಳು. ಕಾರು ಚಾಲಕ, ಸುನಂದಾ ಬಾಗೋಡಿ ಅಪಾಯದಿಂದ ಪಾರಾಗಿದ್ದಾನೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೊಲೆ ಆರೋಪಿಗೆ ಗುಂಡೇಟು ಪ್ರಕರಣ: ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದ ವಿಡಿಯೋ ಲಭ್ಯ

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us