ಹಾಸನ: ಹೂವಿನಹಳ್ಳಿ ಕಾವಲು ಬಳಿ ಕೆಇಬಿ ನೌಕರನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್(36) ಕೊಲೆಯಾದ ವ್ಯಕ್ತಿ. ಗ್ರಾಮದ ಬಳಿಯ ಹೊಲದಲ್ಲಿ ಶವ ಪತ್ತೆಯಾಗಿದೆ.
ಕಳೆದ ರಾತ್ರಿ ಪಾರ್ಟಿ ಮಾಡುತ್ತಿದ್ದವರೇ ಸಂತೋಷ್ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶವದ ಪಕ್ಕದಲ್ಲಿ ಮದ್ಯದ ಬಾಟಲ್ ಹಾಗೂ ಊಟದ ಪ್ಯಾಕ್ಗಳು ಪತ್ತೆಯಾಗಿವೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಗುಂಡಿನ ದಾಳಿ ಏಕೆ ನಡೀತು. ನಗ್ ಯಾರಿಗೆ ಸೇರಿದ್ದು ಎಂಬಂತೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಬಸವೇಶ್ವರನಗರ: ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪತಿರಾಯನಿಂದ ಆತ್ಮಹತ್ಯೆಗೆ ಯತ್ನ