ಆನೇಕಲ್: ದನ ಮೇಯಿಸಲು ಹೋಗಿದ್ದ ವ್ಯಕ್ತಿ ನಾಪತ್ತೆ, ಚಿರತೆ ಹೊತ್ತೊಯ್ದಿರುವ ಶಂಕೆ

| Updated By: ರಮೇಶ್ ಬಿ. ಜವಳಗೇರಾ

Updated on: Dec 15, 2023 | 7:54 PM

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕುಲುಮೆಪಾಳ್ಯದಲ್ಲಿ ದನ ಮೇಯಿಸಲು ಹೋಗಿದ್ದ ವ್ಯಕ್ತಿಯೊರ್ವ ನಾಪತ್ತೆಯಾಗಿದ್ದಾರೆ. ಕಳೆದ ಬುಧವಾರ ಮಧ್ಯಾಹ್ನ ಬನ್ನೇರುಘಟ್ಟ ಅರಣ್ಯದಂಚಿನಲ್ಲಿ ದನ ಮೇಯಿಸಲು ಹೋದವರು ಮನೆಗೆ ವಾಪಸ್‌ ಆಗಿಲ್ಲ. ಈ ಹಿನ್ನೆಲೆಯಲ್ಲಿ ಚಿರತೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್: ದನ ಮೇಯಿಸಲು ಹೋಗಿದ್ದ ವ್ಯಕ್ತಿ ನಾಪತ್ತೆ, ಚಿರತೆ ಹೊತ್ತೊಯ್ದಿರುವ ಶಂಕೆ
Follow us on

ಬೆಂಗಳೂರು, (ಡಿಸೆಂಬರ್ 15): ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕುಲುಮೆಪಾಳ್ಯದಲ್ಲಿ ದನ ಮೇಯಿಸಲು ಹೋಗಿದ್ದ ವ್ಯಕ್ತಿಯೊರ್ವ (Leopard attack) ನಾಪತ್ತೆಯಾಗಿದ್ದಾರೆ. ಕುಲುಮೆಪಾಳ್ಯ ವಾಸಿ ಪುಟ್ಟಸ್ವಾಮಿ (54) ಎನ್ನುವರು ಕಳೆದ ಬುಧವಾರ ಮಧ್ಯಾಹ್ನ ಬನ್ನೇರುಘಟ್ಟ ಅರಣ್ಯದಂಚಿನಲ್ಲಿ ದನ ಮೇಯಿಸಲು ಹೋದವರು ಮನೆಗೆ ವಾಪಸ್‌ ಆಗಿಲ್ಲ. ಕುಟುಂಬಸ್ಥರು ಎಲ್ಲ ಕಡೆ ಹುಡುಕಿದರೂ ಪುಟ್ಟಸ್ವಾಮಿ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಚಿರತೆ ಹೊತ್ತೊಯ್ದಿರುವ ಶಂಕೆ ಇದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರಿಂದ ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ಮುಂದುವರಿದಿದೆ.

ಇತ್ತ ಕಾಣೆಯಾದ ಪುಟ್ಟಸ್ವಾಮಿ ಬಗ್ಗೆ ಸಣ್ಣ ಸುಳಿವು ಸಿಗುತ್ತಿಲ್ಲ. ಪುಟ್ಟಸ್ವಾಮಿ ನಾಪತ್ತೆ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕುಟುಂಬಸ್ಥರು ಆತಂಕದಲ್ಲೇ ದಿನದೂಡುವಂತಾಗಿದೆ.

ಯುವಕ ನೇಣಿಗೆ ಶರಣು

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನೇಕಲ್ ಪಟ್ಟಣದ ಭೋವಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಯೋಗೇಶ್(29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದೊಂದು ವರ್ಷದ ಹಿಂದೆ ಮದುವೆಯಾಗಿದ್ದ ಯೋಗೇಶ್, ಪತ್ನಿ ಎಂಟು ತಿಂಗಳ ಗರ್ಭಿಣಿ.

ಕಳೆದ ಮೂರು ವರ್ಷದ ಹಿಂದೆ ಯೋಗೇಶ್ ಸಹೋದರ ಶಿವಕುಮಾರ್ ಸಹ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಇಡೀ ಕುಟುಂಬದ ಜವಾಬ್ದಾರಿ ಯೋಗೇಶ್ ಮೇಲಿತ್ತು. ಆದ್ರೆ ಯೋಗೇಶ್ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದ. ಇದರಿಂದ ಹಣಕಾಸಿನ ಸಮಸ್ಯೆಯಿಂದಾಗಿ ಇತ್ತೀಚಿಗೆ ಮನನೊಂದಿದ್ದ ಯೋಗೇಶ್, ಇಂದು ಬೆಳಗ್ಗೆ ಮನೆಯ ರೂಮಿನಲ್ಲೇ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.