AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಬಾಂಬ್ ಎಂದು ಬರೆದು ವ್ಯಕ್ತಿಯ ಹುಚ್ಚಾಟ: ತಡರಾತ್ರಿಯೇ ಲ್ಯಾಂಡ್​ ಆದ ವಿಮಾನ!

ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ 6E4814 ವಿಮಾನದಲ್ಲಿ ಪ್ರಯಾಣಿಕನೊಬ್ಬ ಬಾತ್ ರೂಮ್‌ನಲ್ಲಿ “ಬಾಂಬ್” ಎಂದು ಬರೆದ ಪರಿಣಾಮ ಆತಂಕ ಸೃಷ್ಟಿಯಾಗಿತ್ತು.ಸುರಕ್ಷತೆಗಾಗಿ ವಿಮಾನವನ್ನು ಮಂಗಳೂರಿನ ಬದಲಿಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ವಿಮಾನ ಮತ್ತು ಪ್ರಯಾಣಿಕರನ್ನು ಪರಿಶೀಲನೆಗೆ ಒಳಪಡಿಸಲಾಗಿತ್ತು.ಆದರೆ ಪರಿಶೀಲನೆ ಬಳಿಕ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಕಾರಣ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ವಿಮಾನದಲ್ಲಿ ಬಾಂಬ್ ಎಂದು ಬರೆದು ವ್ಯಕ್ತಿಯ ಹುಚ್ಚಾಟ: ತಡರಾತ್ರಿಯೇ ಲ್ಯಾಂಡ್​ ಆದ ವಿಮಾನ!
ವಿಮಾನದಲ್ಲಿ ಬಾಂಬ್ ಎಂದು ಬರೆದು ವ್ಯಕ್ತಿಯೊಬ್ಬನ ಹುಚ್ಚಾಟ
ನವೀನ್ ಕುಮಾರ್ ಟಿ
| Edited By: |

Updated on: Oct 19, 2025 | 11:51 AM

Share

ಬೆಂಗಳೂರು, ಅಕ್ಟೋಬರ್ 19: ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (ಸಂಖ್ಯೆ 6E4814) ನಲ್ಲಿ (Indigo Flight) ನಡೆದ ಘಟನೆಯೊಂದು ಪ್ರಯಾಣಿಕರ ಆತಂಕಕ್ಕೆ ಎಡೆಮಾಡಿತ್ತು. ಶನಿವಾರ (ಅ.18) ಮಧ್ಯರಾತ್ರಿ ನಡೆದ ಘಟನೆಯಲ್ಲಿ, ಒಬ್ಬ ಪ್ರಯಾಣಿಕನು ವಿಮಾನದ ಬಾತ್ ರೂಮ್‌ನಲ್ಲಿ ‘ಬಾಂಬ್’ (Bomb) ಎಂದು ಪೆನ್‌ನಿಂದ ಬರೆದಿದ್ದಾನೆ. ಈ ಬರಹವನ್ನು ನೋಡಿರುವ ವಿಮಾನ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪರಿಶೀಲನೆ ಬಳಿಕ ಆತಂಕ ಪಡುವ ಸಂಗತಿಯಿಲ್ಲವೆಂದು ತಿಳಿದ ಪ್ರಯಾಣಿಕರು ಮತ್ತು ಸಿಬ್ಬಂದಿ ನಿಟ್ಟುಸಿರು ಬಿಟ್ಟರು.

ಮಧ್ಯರಾತ್ರಿ ಬೆಂಗಳೂರಿನಲ್ಲಿ ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್

ಸುರಕ್ಷತೆಯ ದೃಷ್ಟಿಯಿಂದ ವಿಮಾನವನ್ನು ಮಂಗಳೂರಿನ ಬದಲಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ಮಧ್ಯರಾತ್ರಿ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್ ಆಗಿದ್ದು, ಏರ್‌ಪೋರ್ಟ್ ಸುರಕ್ಷತಾ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. 168 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ ಬಳಿಕ ಸಂಪೂರ್ಣ ವಿಮಾನ ಮತ್ತು ಪ್ರಯಾಣಿಕರ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.

ಅಪಾವಿಲ್ಲವೆಂದು ತಿಳಿದ ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಹುಚ್ಚಾಟದಿಂದ ಪ್ರಯಾನಿಕರೆಲ್ಲರಲ್ಲಿಯೂ ಆತಂಕ ಹುಟ್ಟಿಸಿ, ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿಸಿದ ವ್ಯಕ್ತಿ ಯಾರೆಂದು ಸಧ್ಯಕ್ಕೆ ತಿಳಿದು ಬಂದಿಲ್ಲ. ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.