ಮೈಸೂರು: ಮಾನಸ ಗಂಗೋತ್ರಿಯ ವಿದ್ಯಾರ್ಥಿ ಓರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಲಯದ ಬ್ಲಾಕ್ 1ರ ಕೊಠಡಿಯಲ್ಲಿ ಘಟನೆ ನಡೆದಿರುವುದು ತಿಳಿದು ಬಂದಿದೆ.
ಮೂಲತಃ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ಕೊಠಡಿಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಡಿಕೊಂಡಿದ್ದಾನೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಸಾವಿಗೆ ನಿಖರ ಮಾಹಿತಿ ಸಿಕಿಲ್ಲ. ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಓದು ತಲೆಗೆ ಹತ್ತುತ್ತಿಲ್ಲ ಅಂತಾ ಬೆಳಗಾವಿಯ SSLC ವಿದ್ಯಾರ್ಥಿ ಆತ್ಮಹತ್ಯೆ
ಇದನ್ನೂ ಓದಿ: ಶಿವಮೊಗ್ಗ ಕಾರ್ಗಲ್ ಬಳಿ ಡೆತ್ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Published On - 10:25 am, Sun, 14 March 21