AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ಅನುಮಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಅಶೋಕ್

ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಅಲ್ಲದೆ, ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಹೆಚ್ಚಾಗಿದೆ ಎಂದಿದ್ದಾರೆ. ನಾಗಮಂಗಲ ಗಲಭೆ ಸೇರಿದಂತೆ ರಾಜ್ಯದ ಎಲ್ಲ ಕೋಮು ಗಲಭೆ ಪ್ರಕರಣಗಳ ತನಿಖೆಯನ್ನು ದೇಶದ ಭದ್ರತೆ ದೃಷ್ಟಿಯಿಂದ ಎನ್​​ಐಎಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ಅನುಮಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಅಶೋಕ್
ಅಶೋಕ್Image Credit source: PTI
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on:Sep 16, 2024 | 12:15 PM

ಬೆಂಗಳೂರು, ಸೆಪ್ಟೆಂಬರ್ 16: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ನಾಗಮಂಗಲ ಗಲಭೆಯಲ್ಲಿ ಕೇರಳ‌ ಮೂಲದವರ ಮತ್ತು ನಿಷೇಧಿತ ಪಿಎಫ್​ಐ ಸಂಘಟನೆ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿರುವ ಬೆನ್ನಲ್ಲೇ ಅಶೋಕ್ ಈ ಹೇಳಿಕೆ ನೀಡಿದ್ದಾರೆ

‘‘ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್​​ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ’’ ಎಂದು ಎಕ್ಸ್ ಸಂದೇಶದಲ್ಲಿ ಅಶೋಕ್ ಉಲ್ಲೇಖಿಸಿದ್ದಾರೆ.

ಅಶೋಕ್ ಎಕ್ಸ್ ಸಂದೇಶ

‘‘ಇಂತಹ ಘಟನೆಗಳು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್​ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ’’ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ನಾಗಮಂಗಲ ಗಲಭೆ ಸಂಬಂಧ ದಾಖಲಾಗಿರುವ ಎಫ್​ಐಆರ್​​ನಲ್ಲಿ ಕೇರಳ ಮೂಲದ ಇಬ್ಬರ ಹೆಸರು ಇರುವುದು ಭಾನುವಾರ ಬೆಳಕಿಗೆ ಬಂದಿತ್ತು. ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿರುವ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ನಾಗಮಂಗಲ ಗಲಭೆ: ಎನ್​ಐಎ ತನಿಖೆಗೆ ಅಶೋಕ್ ಆಗ್ರಹ

ನಾಗಮಂಗಲ ಗಲಭೆಯಲ್ಲಿ ಹಿಂದೂಗಳ ಮೇಲೆ ಹೆಚ್ಚು ಕೇಸ್ ಹಾಕಲಾಗಿದೆ. ಗಲಭೆಯಲ್ಲಿ ಪಿಎಫ್ಐ ಲಿಂಕ್ ಇದ್ದವರೂ ಇದ್ದರು ಎನ್ನಲಾಗಿದೆ. ಅವರನ್ನು ಕೇರಳದಿಂದ ಕರೆಸುವ ಕೆಲಸ ಕಿಡಿಗೇಡಿ ಮುಸ್ಲಿಮರು ಮಾಡಿದ್ದಾರೆ. ಮಂಗಳೂರಿನಲ್ಲೂ ಕೋಮುಗಲಭೆ ಆಗುತ್ತಿದೆ. ಘಟನೆಯ ತನಿಖೆಯನ್ನು ಎನ್​ಐಎಗೆ ವಹಿಸಬೇಕು ಎಂದು ಅಶೋಕ್ ಆಗ್ರಹಿಸಿದರು.

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ರಾಜಾರೋಷವಾಗಿ ಘೋಷಣೆ ಕೂಗುತ್ತಾ ಹೋಗಿದ್ದಾರೆ. ಈ ಸರ್ಕಾರ ಬಂದ ಮೇಲೆ ಭಯೋತ್ಪಾದಕರಿಗೆ, ಪಿಎಫ್ಐನವರಿಗೆ ಭಯ ಇಲ್ಲದಂತಾಗಿದೆ. ಒಂದು ಕಡೆ ರಾಹುಲ್ ವಿದೇಶಗಳಲ್ಲಿ ಭಾರತ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಮತ್ತೆ ವಿಭಜನೆ ಹುನ್ನಾರಕ್ಕೆ ಕಾಂಗ್ರೆಸ್ ಮುಂದಾಗಿದೆ. ನಾಗಮಂಗಲ, ಮಂಗಳೂರು, ಚಿಕ್ಕಮಗಳೂರು ಘಟನೆಗಳಿಂದ ಮತ್ತೆ ವಿಭಜನೆ ಕೆಲಸಕ್ಕೆ ಮುಂದಾಗಿದೆ ಎಂದು ಅಶೋಕ್ ಟೀಕಿಸಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಪ್ರಗತಿಪರರು, ನಗರ ನಕ್ಸಲರು ಕಾಂಗ್ರೆಸ್​​ಗೆ ಕುಮ್ಮಕ್ಕು ಕೊಡ್ತಿದ್ದಾರೆ. ಈ ಪ್ರಗತಿಪರರು, ನಗರ ನಕ್ಸಲರು ಯಾಕೆ ಈ ಘಟನೆಗಳನ್ನು ಖಂಡಿಸ್ತಿಲ್ಲ? ಮಂಗಳೂರು, ಚಿಕ್ಕಮಗಳೂರು, ನಾಗಮಂಗಲ ಘಟನೆಗಳ ತನಿಖೆಯನ್ನು ಎನ್ಐಎಗೆ ವಹಿಸಬೇಕು ಅಂತ ಆಗ್ರಹಿಸುತ್ತೇನೆ. ಬಾಂಬ್ ತಯಾರಿಗೆ ಕಚ್ಚಾ ವಸ್ತು, ಜಾಗ ಕೊಟ್ಟಿದ್ದು, ಎಲ್ಲಿ ಇದನ್ನು ತಯಾರು ಮಾಡಿದ್ರು? ಇಲ್ಲಿನ ಮಸೀದಿಗಳಲ್ಲಿ ತಯಾರಿಸಿದ್ರಾ, ಹೊರಗಿಂದ ತಂದಿದ್ರಾ? ದೇಶದ ಭದ್ರತೆ ದೃಷ್ಟಿಯಿಂದ ಇದೆಲ್ಲದರ ತನಿಖೆ ಆಗಲು ಎನ್ಐಗೆ ವಹಿಸಲಿ ಎಂದು ಅಶೋಕ್ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:05 am, Mon, 16 September 24

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ