AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಕಸಾಪ ತೆಗೆದುಕೊಂಡ 6 ನಿರ್ಣಾಯಗಳು ಹೀಗಿವೆ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮದ ಸಮಗ್ರ ಜಾರಿ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ, ಸರ್ಕಾರಿ ಕನ್ನಡ ಶಾಲೆಗಳ ಸುಧಾರಣೆ ಮುಂತಾದ ಆರು ಪ್ರಮುಖ ನಿರ್ಣಯಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನಿರ್ಣಯಗಳನ್ನು ಕೈಗೊಂಡಿದ್ದು, ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯರನ್ನು ಕಸಾಪ ಮನವಿ ಮಾಡಿದೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಕಸಾಪ ತೆಗೆದುಕೊಂಡ 6 ನಿರ್ಣಾಯಗಳು ಹೀಗಿವೆ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಕಸಾಪ ತೆಗೆದುಕೊಂಡ 6 ನಿರ್ಣಾಯಗಳು ಹೀಗಿವೆ
ಪ್ರಶಾಂತ್​ ಬಿ.
| Edited By: |

Updated on:Dec 22, 2024 | 6:18 PM

Share

ಮಂಡ್ಯ, ಡಿಸೆಂಬರ್​ 22: ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಇಂದು ಸಂಪನ್ನಗೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

ಬಹಿರಂಗ ಅಧಿವೇಶದಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ತೆಗೆದುಕೊಂಡ ನಿರ್ಣಾಯಗಳು ಹೀಗಿವೆ.

  •  ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ- 2022 ಸಮಗ್ರ ಜಾರಿಗೆಗೆ ಒತ್ತಾಯ
  • ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು‌. ಖಾಲಿ ಇರುವ ಶಿಕ್ಚಕರ ಹುದ್ದೆ ಭರ್ತಿ ಮಾಡುವುದು.
  •  ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಜೊತೆಗೆ ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್​ಗಳನ್ನು ಸರ್ಕಾರ ಎದುರಿಸಬೇಕು.
  • ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
  • ರಾಷ್ಟ್ರಕವಿ ಪ್ರಶಸ್ತಿಯನ್ನ ಘೋಷಿಸಿಬೇಕು.
  • 87ನೇ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿಗೆ ಸೇರಿ ಎಲ್ಲರಿಗೂ, ಗಣ್ಯರಿಗೆ ಅಭಿನಂದನೆಗೆ ಮಂಡನೆ.

ಇದನ್ನೂ ಓದಿ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

ಈ ಎಲ್ಲಾ ವಿಷಯಗಳನ್ನು ಅನುಮೋದನೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನೊಂದು ವಾರದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ನಿರ್ಣಯಗಳನ್ನು ಅಂಗೀಕರಿಸುವಂತೆ ಕಸಾಪ ತಂಡ ಮನವಿ ಮಾಡಲಿದೆ.

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿಯ ಡಿಂಡಿಮ ಮೊಳಗಿದೆ. ಮೊದಲ ದಿನ ಬರೋಬ್ಬರಿ 2 ಲಕ್ಷ ಜನ ಸೇರಿ ದಾಖಲೆ ಬರೆದಿದ್ದರೆ, ಎರಡು ಮತ್ತು ಮೂರನೇ ದಿನ ಕೂಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು.

ಇದನ್ನೂ ಓದಿ: ಬಾಡೇ ನಮ್ಮ ಮನೆ ಗಾಡು: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು

ನಿನ್ನೆ 5 ವಿಷಯಗಳ ಕುರಿತು ಪ್ರಧಾನ ವೇದಿಕೆಯಲ್ಲಿ ಕವಿಗೋಷ್ಠಿ ನಡೆಸಲಾಯಿತು. ಸಂಜೆ ಸಮ್ಮೇಳಾನಾಧ್ಯಕ್ಷ ಗೊ.ರು.ಚೆ ಜತೆ ಸಂವಾದ ನಡೆಯಿತು. ಇನ್ನು ರಾತ್ರಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರಿಂದ ಸಂಗೀತ ಕಾರ್ಯಕ್ರಮದಲ್ಲಿ, ಎಲ್ಲರೂ ಕುಣಿದು ಕುಪ್ಪಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:16 pm, Sun, 22 December 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ