ಮಂಡ್ಯ, ಡಿಸೆಂಬರ್ 22: ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಇಂದು ಸಂಪನ್ನಗೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.
ಇದನ್ನೂ ಓದಿ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ
ಈ ಎಲ್ಲಾ ವಿಷಯಗಳನ್ನು ಅನುಮೋದನೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನೊಂದು ವಾರದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ನಿರ್ಣಯಗಳನ್ನು ಅಂಗೀಕರಿಸುವಂತೆ ಕಸಾಪ ತಂಡ ಮನವಿ ಮಾಡಲಿದೆ.
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿಯ ಡಿಂಡಿಮ ಮೊಳಗಿದೆ. ಮೊದಲ ದಿನ ಬರೋಬ್ಬರಿ 2 ಲಕ್ಷ ಜನ ಸೇರಿ ದಾಖಲೆ ಬರೆದಿದ್ದರೆ, ಎರಡು ಮತ್ತು ಮೂರನೇ ದಿನ ಕೂಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು.
ಇದನ್ನೂ ಓದಿ: ಬಾಡೇ ನಮ್ಮ ಮನೆ ಗಾಡು: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ನಿನ್ನೆ 5 ವಿಷಯಗಳ ಕುರಿತು ಪ್ರಧಾನ ವೇದಿಕೆಯಲ್ಲಿ ಕವಿಗೋಷ್ಠಿ ನಡೆಸಲಾಯಿತು. ಸಂಜೆ ಸಮ್ಮೇಳಾನಾಧ್ಯಕ್ಷ ಗೊ.ರು.ಚೆ ಜತೆ ಸಂವಾದ ನಡೆಯಿತು. ಇನ್ನು ರಾತ್ರಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರಿಂದ ಸಂಗೀತ ಕಾರ್ಯಕ್ರಮದಲ್ಲಿ, ಎಲ್ಲರೂ ಕುಣಿದು ಕುಪ್ಪಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:16 pm, Sun, 22 December 24