ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿ ಹತ್ತೇ ದಿನಕ್ಕೆ ಕೊಲೆಯಾದ ವಿವಾಹಿತ ಮಹಿಳೆ: ಹತ್ಯೆಗೈದು ಚಿನ್ನಾಭರಣ ದೋಚಿದ ಯುವಕ
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನೊಬ್ಬ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿ ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಮಹಿಳೆಯ ಮೇಲಿದ್ದ ಚಿನ್ನಾಭರಣವನ್ನು ದೋಚಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮಂಡ್ಯ, ಜೂನ್ 25: ವಿವಾಹಿತೆಯನ್ನು ಕೊಲೆ (kill) ಮಾಡಿ ಚಿನ್ನಾಭರಣ ದೋಚಿದ ಪ್ರಿಯಕರ ಆಕೆಯ ಶವವನ್ನು ತನ್ನ ಜಮೀನಿನಲ್ಲೇ ಬಚ್ಚಿಟ್ಟಿರುವಂತ ಘಟನೆ ಜಿಲ್ಲೆಯ ಕೆ.ಆರ್‌ಪೇಟೆ ತಾಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಈ ಕೊಲೆಯಿಂದ ಇಡೀ ಸಕ್ಕರೆ ನಗರಿ ಬೆಚ್ಚಿಬಿದ್ದಿದೆ. ಹಾಸನ (Hassan) ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ (35)ಯನ್ನ ಕರೋಟಿ ಗ್ರಾಮದ ಪುನೀತ್ ಹತ್ಯೆಗೈದಿದ್ದಾನೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಪುನೀತ್ ಹಾಗೂ ವಿವಾಹಿತ ಮಹಿಳೆ ಪ್ರೀತಿ ಇಬ್ಬರು ಇನ್ಸ್ಟಾಗ್ರಾಮ್ನಲ್ಲಿ ಇತ್ತೀಚೆಗೆ ಪರಿಚಯವಾಗಿದ್ದಾರೆ. ಗಂಡ, ಮಕ್ಕಳಿದ್ದರೂ ಪ್ರೀತಿ, ಪುನೀತ್ನನ್ನ ಲವ್ ಮಾಡಿದ್ದಾರೆ. ಪರಿಚಯವಾಗಿ ಹತ್ತು ದಿನ ಪ್ರೀತಿ, ಪ್ರೇಮ ಎಂದು ಸುತ್ತಾಡಿದ್ದಾರೆ.
ಇದನ್ನೂ ಓದಿ: ಪ್ರೇಮಿಗಳ ನಡುವೆ ಕಿರಿಕ್: ಆ ವಿಡಿಯೋದಿಂದಲೇ ದುರಂತ ಸಾವುಕಂಡ ಪ್ರೇಯಸಿ
ಅದೇ ರೀತಿಯಾಗಿ ಕಳೆದ ಭಾನುವಾರ ಒಟ್ಟಿಗೆ ಕಾರಿನಲ್ಲಿ ಮೈಸೂರು, ಮಂಡ್ಯ ಪ್ರವಾಸಿ ಸ್ಥಳಗಳನ್ನು ಸುತ್ತಾಡಿ ಫುಲ್ ಎಂಜಾಯ್ ಮಾಡಿದ್ದಾರೆ. ಪ್ರಿಯತಮೆ ಫೋನ್ಗೆ ಬಂದ ಕಾಲ್ನಿಂದಲೇ ಐನಾತಿ ಸಿಕ್ಕಿಬಿದಿದ್ದಾನೆ. ಬಳಿಕ ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ಆಗಿದೆ. ಅಲ್ಲೇ ಪ್ರೀತಿಯನ್ನ ಕೊಲೆ ಮಾಡಿದ ಪುನೀತ್, ಮೈಮೆಲಿದ್ದ ಚಿನ್ನಾಭರಣ ದೋಚಿದ್ದಾನೆ. ಬಳಿಕ ಕರೋಟಿ ಗ್ರಾಮದ ತನ್ನ ಜಮೀನಿನಲ್ಲಿ ಶವ ಬಿಚ್ಚಿಟ್ಟಿದ್ದಾನೆ.
ಡಿವೈಡರ್ಗೆ ಬಸ್ ಡಿಕ್ಕಿ: 20 ಜನರ ಪೈಕಿ 8 ಜನರಿಗೆ ಗಾಯ
ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಗೆ ಸೇರಿದ ಬಸ್ ಕೆಜಿಎಫ್ನ ಬೆಮೆಲ್ ನಗರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ 20 ಜನರ ಪೈಕಿ 8 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.
ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ
ಗಾಯಾಳುಗಳನ್ನು ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೊದಲ ಪಾಳಿಯ ಕಾರ್ಮಿಕರನ್ನು ಕರೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:11 am, Wed, 25 June 25







