AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರಿ-ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ವೇಳೆ, ಅವರ ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಕಾವ್ಯಾ, ಮುತ್ತುರಾಜ್ ಮತ್ತು ಕೀರ್ತನಾ ಸಾವನ್ನಪ್ಪಿದ್ದು, ಕೊಪ್ಪ ಗ್ರಾಮದಲ್ಲಿ ಶೋಕ ಮಡುಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು
ಹಾಲಿನ ಟ್ಯಾಂಕರ್ ಡಿಕ್ಕಿ
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 15, 2026 | 10:07 AM

Share

ಮಂಡ್ಯ, ಸೆ,15: ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಸಾವು.  ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಬಳಿ ಇಂದು (ಸೆ.15) ಮುಂಜಾನೆ ನಡೆದಿದೆ. ಮೃತರನ್ನು ಕೊಪ್ಪ ಗ್ರಾಮದ ನಿವಾಸಿಗಳಾದ ಕಾವ್ಯಾ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ.

ಮೃತ ಮೂವರೂ ಗೌರಿ-ಗಣೇಶ ಹಬ್ಬದ ಆಚರಣೆಗಾಗಿ ತಮ್ಮ ಸ್ವಗ್ರಾಮವಾದ ಕೊಪ್ಪಕ್ಕೆ ಆಗಮಿಸಿದ್ದರು. ಹಬ್ಬ ಮುಗಿಸಿ ಇಂದು ಮುಂಜಾನೆ ಸ್ಕೂಟರ್‌ನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಸಮೀಪ ಚಲಿಸುತ್ತಿದ್ದ ವೇಳೆ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಇವರ ಸ್ಕೂಟರ್‌ಗೆ ಸರಾಟವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಗಣೇಶ ಚತುರ್ಥಿ ದಿನವೇ ಭೀಕರ ಅಗ್ನಿ ಅವಘಡ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಗ್ರಾಮದ ಮೂವರು ಉದಯೋನ್ಮುಖ ಯುವಕ-ಯುವತಿಯರು ಒಂದೇ ಅಪಘಾತದಲ್ಲಿ ಸಾವನ್ನಪ್ಪಿರುವುದು ಕೊಪ್ಪ ಗ್ರಾಮದಲ್ಲಿ ಶೋಕಸಾಗರ ತಂದಿಟ್ಟಿದೆ.

ಗಂಭೀರ ಸ್ಥಿತಿಯಲ್ಲಿ ಮತ್ತೊಬ್ಬ ಮಗಳು

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಮೃತಪಟ್ಟವರು ಒಂದೇ ಕುಟುಂಬದ ಗಂಡ, ಹೆಂಡತಿ ಮತ್ತು ಮಗಳು ಎಂಬುದು ತಿಳಿದುಬಂದಿದ್ದು, ಅಪಘಾತದಲ್ಲಿ ಮತ್ತೊಬ್ಬಳು ಮಗಳು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಡಿಕ್ಕಿಯ ಭೀಕರತೆಗೆ ರಸ್ತೆಗೆ ಎಸೆಯಲ್ಪಟ್ಟ ಮುತ್ತುರಾಜ್, ಅವರ ಪತ್ನಿ ಹಾಗೂ ಹಿರಿಯ ಮಗಳು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದೃಷ್ಟವಶಾತ್ ಮತ್ತೊಬ್ಬಳು ಸಣ್ಣ ಮಗಳು ತೀವ್ರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಬ್ಬದ ಸಂಭ್ರಮದಲ್ಲಿದ್ದ ತವರು ಮನೆಯವರು ಹಾಗೂ ಸ್ವಗ್ರಾಮ ಕೂತನಹಳ್ಳಿಯ ನಿವಾಸಿಗಳು ಈ ದುರಂತ ಸುದ್ದಿ ಕೇಳಿ ಆಘಾತಗೊಂಡಿದ್ದು, ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ಯಾಂಕರ್ ಚಾಲಕನ ವಿರುದ್ಧ ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 am, Tue, 15 September 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ