ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ: ಧರಣಿ ಕುಳಿತ್ತಿದ್ದ ರವಿ ಗಣಿಗಗೆ ಅನುಮೋದನೆ ಪತ್ರ ರವಾನಿಸಿದ NHAI

ಮಂಡ್ಯ ತಾಲೂಕಿನ ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ ವಿಚಾರವಾಗಿ ರಾಮನಗರದ ಬಸವನಪುರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಶಾಸಕ ರವಿ ಗಣಿಗ ಪ್ರತಿಭಟನೆ ನಡೆಸಿದ್ದರು. ಈ ವಿಚಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಗಮನಕ್ಕೆ ಬಂದ ಕೂಡಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಸಿಕ್ಕಿರುವ ಅನುಮತಿಯ ದಾಖಲಾತಿ ಪತ್ರಗಳನ್ನು ಶಾಸಕ ರವಿ ಗಣಿಗಗೆ ಪತ್ರ ಕಳುಹಿಸಿದ್ದಾರೆ.

ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ: ಧರಣಿ ಕುಳಿತ್ತಿದ್ದ ರವಿ ಗಣಿಗಗೆ ಅನುಮೋದನೆ ಪತ್ರ ರವಾನಿಸಿದ NHAI
ಶಾಸಕ ರವಿ ಗಣಿಗ, NHAI ಪತ್ರ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on: Mar 07, 2024 | 4:41 PM

ಮಂಡ್ಯ, ಮಾರ್ಚ್​​​ 7: ತಾಲೂಕಿನ ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ರವಿ ಗಣಿಗ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳು ಈಗಾಗಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಸಿಕ್ಕಿರುವ ಅನುಮತಿಯ ದಾಖಲಾತಿ ಪತ್ರಗಳನ್ನು ಶಾಸಕ ರವಿ ಗಣಿಗಗೆ ಪತ್ರ ಕಳುಹಿಸಿದ್ದಾರೆ. ಜೊತೆಗೆ ಅಂಡರ್‌ಪಾಸ್ ನಿರ್ಮಾಣದ ಕಾರ್ಯ ಟೆಂಡರ್​ ಹಂತದಲ್ಲಿದೆ ಎಂದು ಸ್ಪಷ್ಟನೆ ನೀಡಿದೆ. 7.34 ಕೋಟಿ ವೆಚ್ಚದಲ್ಲಿ ಹನಕೆರೆ ಬಳಿ ಅಂಡರ್‌ಪಾಸ್‌ ನಿರ್ಮಾಣಕ್ಕೆ ಫೆ.24ರಂದು ಅನುಮೋದನೆ ದೊರೆತಿದೆ. ಈ ಕಾಮಗಾರಿ ಟೆಂಡರ್ ಹಂತದಲ್ಲಿ ಇದೆ ಎಂದು ಪತ್ರದಲ್ಲಿ NHAI ಉಲ್ಲೇಖಿಸಿದೆ.

ಶಾಸಕ ರವಿ ಗಣಿಗ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ

ಅಂಡರ್​ಪಾಸ್ ವಿಚಾರವಾಗಿ ಶಾಸಕ ರವಿ ಗಣಿಗ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದೆ ಸುಮಲತಾ ನಾನು ಏನು ಮಾಡಿದ್ದೇನೆಂದು ದಾಖಲೆ ಸಮೇತ ಉತ್ತರ ನೀಡುವೆ. ಹನಕೆರೆ ಬಳಿ ಅಂಡರ್​ಪಾಸ್ ನಿರ್ಮಾಣಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗಿದೆ. ಸಾಕಷ್ಟು ಬಾರಿ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾಗಿ ಬೇಡಿಕೆ ಇಟ್ಟಿದ್ದೆ. ಅದರ ಫಲವಾಗಿ ಅಂಡರ್​ಪಾಸ್ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಲ್ಲಿ ಪ್ರೋಸೆಸ್ ಆಗಿದೆ, ಸಚಿವರ ಸಹಿ ಬಾಕಿಯಿದೆ. ಇಂತಹ ಸಂದರ್ಭದಲ್ಲಿ ಶಾಸಕರು ಪ್ರತಿಭಟಿಸುವುದು ಎಷ್ಟು ಸರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುತೂಹಲ ಮೂಡಿಸಿದ ಮಂಡ್ಯ ಸಂಸದೆ ಸುಮಲತಾ ನಡೆ; ಟಿಕೆಟ್ ಮಿಸ್ ಆದರೆ ಪಕ್ಷೇತರವಾಗಿ ಕಣಕ್ಕೆ?

ಶಾಸಕರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಸರಿಯಲ್ಲ. ನನ್ನ ಹೋರಾಟದಿಂದ ಆಗಿದೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಇರಬಹುದು. ಅರ್ಧಂಬರ್ಧ ತಿಳಿದುಕೊಂಡು ಹೀಗೆ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಚಲುವರಾಯಸ್ವಾಮಿ ಮನವಿ

ರಾಮನಗರದ ಬಸವನಪುರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಶಾಸಕ ರವಿ ಗಣಿಗ ನಡೆಸುತ್ತಿರುವ ಸ್ಥಳಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ N.ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಮಾಡಿಸುವುದು ನನ್ನ ಜವಾಬ್ದಾರಿ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ದುಡ್ಡು ಪಡೆಯುವ ಸಂಸ್ಕೃತಿ‌‌ ಇದೆ, ದುಡ್ಡಿನಿಂದ ಮಂಡ್ಯ ಜನರನ್ನ ಕೊಳ್ಳಲು ಆಗಲ್ಲ: ಸಂಸದೆ ಸುಮಲತಾ

ರಾಜ್ಯ ಸರ್ಕಾರದಿಂದ ಒತ್ತಡ ಹಾಕಿಸಿ ಕಾಮಗಾರಿ‌ ಮಾಡಿಸೋಣ. ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ. ಬಳಿಕ ಎಳನೀರು ಕುಡಿಯುವ ಮೂಲಕ ರವಿ ಗಣಿಗ ಸತ್ಯಾಗ್ರಹ ಕೈಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ