ಮಂಡ್ಯ, ಮಾರ್ಚ್ 7: ತಾಲೂಕಿನ ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ರವಿ ಗಣಿಗ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳು ಈಗಾಗಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಸಿಕ್ಕಿರುವ ಅನುಮತಿಯ ದಾಖಲಾತಿ ಪತ್ರಗಳನ್ನು ಶಾಸಕ ರವಿ ಗಣಿಗಗೆ ಪತ್ರ ಕಳುಹಿಸಿದ್ದಾರೆ. ಜೊತೆಗೆ ಅಂಡರ್‌ಪಾಸ್ ನಿರ್ಮಾಣದ ಕಾರ್ಯ ಟೆಂಡರ್ ಹಂತದಲ್ಲಿದೆ ಎಂದು ಸ್ಪಷ್ಟನೆ ನೀಡಿದೆ. 7.34 ಕೋಟಿ ವೆಚ್ಚದಲ್ಲಿ ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಫೆ.24ರಂದು ಅನುಮೋದನೆ ದೊರೆತಿದೆ. ಈ ಕಾಮಗಾರಿ ಟೆಂಡರ್ ಹಂತದಲ್ಲಿ ಇದೆ ಎಂದು ಪತ್ರದಲ್ಲಿ NHAI ಉಲ್ಲೇಖಿಸಿದೆ.
ಅಂಡರ್‌ಪಾಸ್ ವಿಚಾರವಾಗಿ ಶಾಸಕ ರವಿ ಗಣಿಗ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದೆ ಸುಮಲತಾ ನಾನು ಏನು ಮಾಡಿದ್ದೇನೆಂದು ದಾಖಲೆ ಸಮೇತ ಉತ್ತರ ನೀಡುವೆ. ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗಿದೆ. ಸಾಕಷ್ಟು ಬಾರಿ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾಗಿ ಬೇಡಿಕೆ ಇಟ್ಟಿದ್ದೆ. ಅದರ ಫಲವಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಲ್ಲಿ ಪ್ರೋಸೆಸ್ ಆಗಿದೆ, ಸಚಿವರ ಸಹಿ ಬಾಕಿಯಿದೆ. ಇಂತಹ ಸಂದರ್ಭದಲ್ಲಿ ಶಾಸಕರು ಪ್ರತಿಭಟಿಸುವುದು ಎಷ್ಟು ಸರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕುತೂಹಲ ಮೂಡಿಸಿದ ಮಂಡ್ಯ ಸಂಸದೆ ಸುಮಲತಾ ನಡೆ; ಟಿಕೆಟ್ ಮಿಸ್ ಆದರೆ ಪಕ್ಷೇತರವಾಗಿ ಕಣಕ್ಕೆ?
ಶಾಸಕರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಸರಿಯಲ್ಲ. ನನ್ನ ಹೋರಾಟದಿಂದ ಆಗಿದೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಇರಬಹುದು. ಅರ್ಧಂಬರ್ಧ ತಿಳಿದುಕೊಂಡು ಹೀಗೆ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಮನಗರದ ಬಸವನಪುರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಶಾಸಕ ರವಿ ಗಣಿಗ ನಡೆಸುತ್ತಿರುವ ಸ್ಥಳಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ N.ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಮಾಡಿಸುವುದು ನನ್ನ ಜವಾಬ್ದಾರಿ.
ರಾಜ್ಯ ಸರ್ಕಾರದಿಂದ ಒತ್ತಡ ಹಾಕಿಸಿ ಕಾಮಗಾರಿ ಮಾಡಿಸೋಣ. ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ. ಬಳಿಕ ಎಳನೀರು ಕುಡಿಯುವ ಮೂಲಕ ರವಿ ಗಣಿಗ ಸತ್ಯಾಗ್ರಹ ಕೈಬಿಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.