AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ನಿಗೂಢ ರಕ್ತದ ಕಲೆಗಳು ಕಾಣಿಸಿಕೊಂಡಿರುವುದು ಗ್ರಾಮದೆಲ್ಲೆಡೆ ಆತಂಕ ಮೂಡಿಸಿದೆ. ಹಾಲ್, ಬಾತ್‌ರೂಂ, ಟಿವಿ, ಫ್ಯಾನ್ ಎಲ್ಲೆಡೆ ರಕ್ತದ ಕಲೆಗಳು ಕಂಡುಬಂದಿದ್ದು, ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದೆ. ರಕ್ತದ ಮಾದರಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಮಂಡ್ಯ: ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!
ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!
ದಿಲೀಪ್​, ಚೌಡಹಳ್ಳಿ
| Edited By: |

Updated on:Oct 28, 2025 | 10:57 AM

Share

ಮಂಡ್ಯ, ಅಕ್ಟೋಬರ್ 28: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ವಿಚಿತ್ರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸತೀಶ್ ಎಂಬುವರ ಮನೆಯೊಳಗೆ ಆಕಸ್ಮಿಕವಾಗಿ ರಕ್ತದ ಕಲೆಗಳು (Blood Stains) ಕಾಣಿಸಿಕೊಂಡಿದ್ದು, ಈ ನಿಗೂಢ ಘಟನೆಗೆ ಕಾರಣ ತಿಳಿಯದೆ ದಂಪತಿ ಭಯಭೀತರಾಗಿದ್ದಾರೆ.

ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆ!

ಸತೀಶ್ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಬೆಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಸೇರಿಸಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಸೋಮವಾರ ಬೆಳಿಗ್ಗೆ ಸತೀಶ್ ಅವರ ಪತ್ನಿ ಮನೆ ಸ್ವಚ್ಛಗೊಳಿಸಿ, ಉಪಹಾರ ತಯಾರಿಸಲು ಅಡುಗೆಮನೆಗೆ ತೆರಳಿದ್ದರು. ಕೆಲವೇ ಕ್ಷಣಗಳಲ್ಲಿ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡವು. ಬೆಚ್ಚಿಬಿದ್ದ ದಂಪತಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ರಕ್ತಸಿಕ್ತವಾದ ಮನೆಯ ವೀಡಿಯೋ ಇಲ್ಲಿದೆ

ಮಂಡ್ಯದ ಮನೆಯಲ್ಲಿ ಸಿಕ್ಕ ರಕ್ತದ ಸ್ಯಾಂಪಲ್​ ಲ್ಯಾಬ್​ಗೆ

ಘಟನೆಯ ಮಾಹಿತಿ ಆಧರಿಸಿ ಬೆಸಗರಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಎಫ್‌ಎಸ್‌ಎಲ್ ಹಾಗೂ ಶ್ವಾನದಳದ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಮನೆಯಲ್ಲಿ ಕಂಡುಬಂದ ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಅದು ನಿಜವಾಗಿಯೂ ಮಾನವ ರಕ್ತವೋ ಅಲ್ಲವೋ ಎಂಬುದನ್ನು ದೃಢಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಘಟನೆ ತಿಳಿದ ಸ್ಥಳೀಯರು ದಂಪತಿ ಮನೆಯ ಮುಂದೆ ಜಮಾಯಿಸಿದ್ದು, ಗ್ರಾಮದೆಲ್ಲೆಡೆ ಆತಂಕ ಮನೆಮಾಡಿತ್ತು.

ಸ್ಥಳೀಯರಲ್ಲಿ ಈ ಘಟನೆ ಆತಂಕ ಮತ್ತು ಕುತೂಹಲ ಮೂಡಿಸಿದ್ದು, ದಂಪತಿ ಆಸ್ತಿ ವಿವಾದದ ಹಿನ್ನೆಲೆ ಸಂಬಂಧಿಕರಿಂದ ವಾಮಾಚಾರದ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಎಲ್ಲಾ ಕೋಣೆಗಳಲ್ಲಿ ತನಿಖೆ ನಡೆಸಿದ್ದು, ಪ್ರಯೋಗಾಲಯದಿಂದ ಬರಬೇಕಾದ ರಿಪೋರ್ಟನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 am, Tue, 28 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್