ಲಂಚಕ್ಕೆ ಬೇಡಿಕೆ, ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ: ರಾಜ್ಯಪಾಲರಿಗೆ ದೂರು

ಕೃಷಿ ಸಚಿವ ಕೃಷಿ ಸಚಿವ ಎನ್​​.ಚಲುವರಾಯಸ್ವಾಮಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದ್ದು, ಇದೀಗ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಲಂಚಕ್ಕೆ ಬೇಡಿಕೆ, ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ: ರಾಜ್ಯಪಾಲರಿಗೆ ದೂರು
ಕೃಷಿ ಸಚಿವ ಚಲುವರಾಯಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Aug 07, 2023 | 10:47 AM

ಬೆಂಗಳೂರು, (ಆಗಸ್ಟ್ 07): ಮಂಡ್ಯ ಜಿಲ್ಲೆಯ ಕೆಎಸ್ಆರ್​ಟಿಸಿ (KSRTC) ಬಸ್ ನಿರ್ವಾಹಕ ವರ್ಗಾವಣೆ ಸಂಬಂಧ ಆತ್ಮಹತ್ಯೆ ಯತ್ನ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ಕೃಷಿ ಸಚಿವ ಎನ್​​.ಚಲುವರಾಯಸ್ವಾಮಿ(n chaluvaraya swamy )ಹೆಸರು ಕೇಳಿಬಂದಿದ್ದು, ವಿಪಕ್ಷಗಳು ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು. ಇದರ ಬೆನ್ನಲ್ಲೇ ಇದೀಗ ಚಲುವರಾಯಸ್ವಾಮಿ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಹೌದು…ಸಚಿವ ಎನ್​​.ಚಲುವರಾಯಸ್ವಾಮಿ ವಿರುದ್ಧ ಲಂಚ(Bribe) ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ನನಗೆ ಮತ ಹಾಕದವರಿಗೆ ಸಹಿ ಕೂಡ ಮಾಡಲ್ಲ ಎಂದ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೃಷಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿಯುವುದಾಗಿ ದೂರಿನ ಪತ್ರದಲ್ಲಿಉಲ್ಲೇಖಿಸಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯಪಾಲರು ಈ ಬಗ್ಗೆ ಸರ್ಕಾರ ಮುಖ್ಯಕಾರ್ಯದರ್ಶಿ ಪತ್ರ ಬರೆದಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರದೀಪ್​ ಸೂಚಿಸಿದ್ದಾರೆ.

ಇನ್ನು ತಮ್ಮ ದೂರಿನ ವಿರುದ್ಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್​ ಲೆಟರ್​​ ಎಂಬ ಮಾಹಿತಿ ನೀಡಿದ್ದಾರೆ. ಪಾಪ ಬಹಳ ಹುಡುಕಿ ಹುಡುಕಿ ಏನೇನೋ ಮಾಡ್ತಿದ್ದಾರೆ . ಜೆಡಿ ಅವರು ನಾನು ಯಾರ ಬಳಿ ಹಣ ಕೇಳಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿಸುತ್ತೇವೆ. ಮೊದಲು ಇದು ಸತ್ಯನಾ, ಅಸತ್ಯಾನ ಎಂದು ತಿಳಿದು ತನಿಖೆ ಮಾಡಿಸುತ್ತೇವೆ, ತಿಂಡಿ, ಊಟ ಮಾಡದೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದರ ಬಗ್ಗೆ ಬೇಜಾರು ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:19 am, Mon, 7 August 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು