Sign In

By signing in or creating an account, you agree with Associated Broadcasting Company's Terms & Conditions and Privacy Policy.

G Madegowda: ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡರಿಗೆ ತೀವ್ರ ಅನಾರೋಗ್ಯ

15 ದಿನಗಳಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿ.ಮಾದೇಗೌಡ ಅವರನ್ನು ಕುಟುಂಬಸ್ಥರು ಇದೀಗ ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುತ್ತಿದ್ದಾರೆ.

G Madegowda: ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡರಿಗೆ ತೀವ್ರ ಅನಾರೋಗ್ಯ
ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 06, 2021 | 11:21 AM

ಮಂಡ್ಯ: ಮಾಜಿ ಸಚಿವ. ಹಿರಿಯ ರೈತ ಹೋರಾಟಗಾರ ಜಿ.ಮಾದೇಗೌಡ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿದ್ದು, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 92 ವರ್ಷದ ಹಿರಿಯ ಜೀವ ಮಾದೇಗೌಡರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ.

15 ದಿನಗಳಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿ.ಮಾದೇಗೌಡ ಅವರನ್ನು ಇದೀಗ ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಆಸ್ಪತ್ರೆಗೆ (G Madegowda Super Speciality Hospital) ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾದೇಗೌಡರ ಪುತ್ರ, ಮಾಜಿ ಎಂಎಲ್​ಸಿ ಮಧು ಮಾದೇಗೌಡ ತಿಳಿಸಿದ್ದಾರೆ. ಜಿ.ಮಾದೇಗೌಡ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಸೇರಿದಂತೆ ಅನೇಕ ಹಿರಿಯರು ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಾದೇಗೌಡರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದರು. ನಿನ್ನೆ ಸೋಮವಾರ ಅವರನ್ನು ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುರಿಸಿದ್ದೇವೆ. ಮಾದೇಗೌಡರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಮಾದೇಗೌಡ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಕ್ಷಿತ್​ ಆರ್​ ಭಾರದ್ವಾಜ್​ ತಿಳಿಸಿದ್ದಾರೆ.

1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ 1989 ಮತ್ತು 1991ರಲ್ಲಿ ಆಯ್ಕೆಗೊಂಡಿದ್ದರು. ಹಿರಿಯ ರಾಜಕಾರಣಿ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಇತರೆ ಅನೇಕ ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.

ಸುಮಾರು ಮೂರು ವರ್ಷಗಳಿಂದ ಸ್ವತಃ ಅವರೇ ಮುಂದೆ ನಿಂತು ಪ್ರಾರಂಭಿಸಿದ್ದ ಜಿ ಮಾದೇಗೌಡ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರಿಗೆ ಈಗ ಚಿಕಿತ್ಸೆ ಮುಂದುವರಿಸಲಾಗಿದೆ. ಈ ಆಸ್ಪತ್ರೆಯು ಮದ್ದೂರು ತಾಲೂಕಿನ ಭಾರತಿನಗರ ಬಳಿಯಿದೆ.

(mandya ex mp g madegowda serious ill health)

Published On - 10:02 am, Tue, 6 July 21