ಮಂಡ್ಯ: 25-30 ಸಾವಿರಕ್ಕೆ ಗರ್ಭಪಾತ ಮಾಡುತಿದ್ವಿ, ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ನರ್ಸ್

ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಬಂಧಿತ ನರ್ಸ್ ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. ಆರೋಪಿಗಳು 25-30 ಸಾವಿರಕ್ಕೆ ಗರ್ಭಪಾತ ಮಾಡುತ್ತಿದ್ದರಂತೆ. ಹೆಣ್ಣು ಮಗು ಬಗ್ಗೆ ನಿರಾಸಕ್ತಿ ತೋರಿಸುವ ಗರ್ಭಿಣಿಯರಿಂದ ಹಣ ಪಡೆದು ಈ ಕರಾಳ ದಂಧೆ ನಡೆಸಲಾಗುತ್ತಿತ್ತು ಎಂದು ನರ್ಸ್ ತಿಳಿಸಿದ್ದಾರೆ.

ಮಂಡ್ಯ: 25-30 ಸಾವಿರಕ್ಕೆ ಗರ್ಭಪಾತ ಮಾಡುತಿದ್ವಿ, ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತ ನರ್ಸ್
ಸಾಂದರ್ಭಿಕ ಚಿತ್ರ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: May 18, 2024 | 10:20 AM

ಮಂಡ್ಯ, ಮೇ.18: ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಸರ್ಕಾರಿ ಕ್ವಾಟ್ರಸ್ ನಲ್ಲಿ ಹೆಣ್ಣು ಭ್ರೂಣ ಹತ್ಯೆ (Female Foeticide)  ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನರ್ಸ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಆರೋಪಿಗಳು 25-30 ಸಾವಿರಕ್ಕೆ ಹೆಣ್ಣು ಭ್ರೂಣ ಹತ್ಯೆ ಮಾಡ್ತಿದ್ದರು. ಗರ್ಭಿಣಿಯರನ್ನು ಟಾರ್ಗೆಟ್ ಮಾಡಿ ಅವರಿಗೆ ಹೆಣ್ಣು ಮಗು ಬಗ್ಗೆ ನಿರಾಸಕ್ತಿಯಿದ್ರೆ ಭ್ರೂಣ ಹತ್ಯೆ ಮಾಡ್ತಿದ್ದರು ಎಂದು ವಿಚಾರಣೆ ವೇಳೆ ಕರಾಳ ದಂಧೆಯ ಬಗ್ಗೆ ಬಂಧಿತ ನರ್ಸ್ ಬಾಯ್ಬಿಟ್ಟಿದ್ದಾರೆ.

ಸ್ಕಾನಿಂಗ್ ಸೆಂಟರ್​ಗಳಿಗೆ ಬರುವ ಗರ್ಭಿಣಿಯರನ್ನು ಟಾರ್ಗೆಟ್ ಮಾಡಿ ಎರಡನೇ ಮಗುವಿನ ಸ್ಕ್ಯಾನಿಂಗ್​ಗೆ ಬಂದಿದ್ದಾರೆ ಎಂದರೆ ಗಾಳ ಹಾಕುತ್ತಿದ್ದರು. ಹೆಣ್ಣು ಮಗು ಬಗ್ಗೆ ನಿರಾಸಕ್ತಿ ತೋರಿಸಿದ್ರೆ ಭ್ರೂಣ ಲಿಂಗ ಪರೀಕ್ಷೆ ಮಾಹಿತಿ ನೀಡುತ್ತಿದ್ದರು. ಒಪ್ಪಿಕೊಂಡ್ರೆ ಒಂಟಿ ಮನೆಯಲ್ಲಿ ಸ್ಕ್ಯಾನಿಂಗ್ ನಡೆಸಿ ಹೆಣ್ಣು ಭ್ರೂಣ ಎಂದು ಖಚಿತವಾದ್ರೆ ಪಾಂಡವಪುರಕ್ಕೆ ಗರ್ಭಿಣಿಯನ್ನು ಶಿಫ್ಟ್ ಮಾಡಿ ಬಳಿಕ ಸರ್ಕಾರಿ ಹೆಲ್ತ್ ಕ್ವಾರ್ಟರ್ಸಿನಲ್ಲಿ ಅಬಾರ್ಷನ್ ಮಾಡುತ್ತಿದ್ದರು ಎಂದು ನರ್ಸ್ ಮಾಹಿತಿ ಕಕ್ಕಿದ್ದಾರೆ.

ಪ್ರಕರಣ ಸಂಬಂಧ ಇದುವರೆಗೆ 9 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಮತ್ತಿಬ್ಬರು ಕಿಂಗ್ ಪಿನ್​ಗಳಿಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಕೇವಲ ಎರಡೇ ತಿಂಗಳಲ್ಲಿ 15ಕ್ಕೂ ಹೆಚ್ಚು ಭ್ರೂಣ ಹತ್ಯೆ ನಡೆದಿದೆ. ಸ್ಕ್ಯಾನಿಂಗ್​ಗೆ 15 ಸಾವಿರ, ಭ್ರೂಣಹತ್ಯೆಗೆ 15ರಿಂದ 20 ಸಾವಿರ ನಿಗದಿ ಮಾಡಿ ಈ ಕರಾಳ ದಂಧೆ ನಡೆಸಲಾಗುತ್ತಿತ್ತು. ದಂಧೆಯಲ್ಲಿ ಕೆಲ ಖಾಸಗಿ ಕ್ಲಿನಿಕ್​ಗಳ ನರ್ಸ್​ಗಳು ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಪ್ರಕರಣದ ಸಂಬಂಧ ಪಾಂಡವಪುರ ಎಸಿಯಿಂದಲೂ ಕೋರ್ಟ್ ಗೆ ದೂರು ದಾಖಲಾಗಿದೆ. ಪಾಂಡವಪುರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಜಯಪುರ ಆಸ್ಪತ್ರೆಗಳಲ್ಲಿ ಪ್ರಸವಪೂರ್ವ ಲಿಂಗ ಪತ್ತೆ

ವಿಜಯಪುರ ಜಿಲ್ಲೆಯ ಕೆಲ ಭಾಗ ಹಾಗೂ ವಿಜಯಪುರ ನಗರದ ಕೆಲ ಖಾಸಗಿ ಹೆರಿಗೆ ಆಸ್ಪತ್ರೆಗಳಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ನಗರದ ಆಥಣಿ ರಸ್ತೆಯಲ್ಲಿರೋ ಸಿಂದೂರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ತಿಂಗಳು ಸಿಂದೂರ ಆಸ್ಪತ್ರೆಯಲ್ಲಿ ಪ್ರಸವ ಪೂರ್ವ ಲಿಂಗಪತ್ತೆ, ಭ್ರೂಣಹತ್ಯೆ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಸಿಂದೂರ ಆಸ್ಪತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿತ್ತು. ಆದರೆ ಆಯೋಗದ ಆದೇಶ ಮತ್ತು ಸೂಚನೆ ಅನ್ವಯ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡಿದ್ದರು.

ಇದನ್ನೂ ಓದಿ:  ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಸಿಂದೂರ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ ಮಾತ್ರ ಸೀಜ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಮತ್ತು ಶೇಖರಗೌಡ ರಾಮತ್ನಾಳ ಅವರ ತಂಡ ನಗರದ ಅಸಥಣಿ ರಸ್ತೆಯಲ್ಲಿರುವ ಸಿಂದೂರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದೂರ ಆಸ್ಪತೆ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಿದ್ದಲ್ಲದೇ, ಆಸ್ಪತ್ರೆ ಸೀಜ್ ಮಾಡದೇ ಕೇವಲ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಿರುವ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಮೊಬೈಲ್ ಕರೆ ಮಾಡಿ, ತರಾಟೆಗೆ ತೆಗೆದುಕೊಂಡರು.

ಕಳೆದ ತಿಂಗಳ ಹಿಂದಷ್ಟೇ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರ ಗ್ರಾಮದಲ್ಲಿ ನರ್ಸ್ ಒಬ್ಬರ ಮನೆಯಲ್ಲಿ ಭ್ರೂಣ ಪತ್ತೆ ಮಾಡಲಾಗುತ್ತಿದೆ ಎನ್ನುವ ಪ್ರಕರಣ ಬೆಳಕಿಗೆ ಬಂದಿದೆ. ಸದರಿ ಘಟನೆ ಮಾಸುವ ಮುನ್ನವೇ ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂತಹ ಪ್ರಕರಣ ನಡೆದಿದೆ. ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಂದು ತಿಂಗಳಾದರೂ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ ಮಾಡಿದ್ದೀರಿ ಎಂದು ಹರಿಹಾಯ್ದರು. ಕಾನೂನು ಬಾಹಿರವಾಗಿ ಭ್ರೂಣ ಪತ್ತೆ ಪ್ರಕರಣಗಳು ಆಧುನಿಕ ಯುಗದಲ್ಲಿ ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕಾನೂನು ಬಾಹೀರ ಕೃತ್ಯ ಎಸಗಿದ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪಿಸಿಆರ್ ಮಾಡಲು ವಿಳಂಬ ಮಾಡುತ್ತಿರುವ ಇಲಾಖೆ ಅಧಿಕಾರಿಗಳ ಕ್ರಮ ಸರಿಯಾದುದಲ್ಲ ಎಂದು ಎಚ್ಚರಿಸಿದರು. ಈ ಕುರಿತು ಮಾತನಾಡಿದ ಶಶಿಧರ ಕೋಸುಂಬೆ ಮಾತನಾಡಿದ ಅವರು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ರಜೆ ಇರುವ ಕಾರಣ ದೂರವಾಣಿಯಲ್ಲಿ ಅವರೊಂದಿಗೆ ಮಾತನಾಡಿದೆ. ಕಾನೂನು ನಿಯಮಾವಳಿಗಳ ಪ್ರಕಾರ ಇಂತಹ ಪ್ರಕರಣಗಳ ಪತ್ತೆಯಾದ 48 ಗಂಟೆಗಳಲ್ಲಿ ಪಿಸಿಆರ್ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ನ್ಯಾಯಾಲಯದ ಮುಖಾಂತರವೇ ಕ್ರಿಮಿನಲ್ ಪ್ರಕರಣವೆಂದು ದಾಖಲಾಗುತ್ತೆ ಎಂದು ವಿವರಿಸಿದರು. ಆದರೆ ವಿಜಯಪುರ ನಗರದಲ್ಲಿನ ಪ್ರಕರಣದಲ್ಲಿ ತಿಂಗಳಾದರೂ ಸಹ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಲ್ಲಿ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳುತ್ತಿದ್ದೇವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್