AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Flag Controversy: ಮಂಡ್ಯ ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ, ರಾಜ್ಯದ ಹಲವೆಡೆ ವ್ಯಾಪಿಸಿದ ಧ್ವಜ ವಿವಾದ

ಮಂಡ್ಯದಲ್ಲಿ ಆರಂಭವಾದ ಧ್ವಜ ವಿವಾದ ಈಗ ರಾಜ್ಯದ ಇತರ ಕಡೆಗಳಿಗೂ ವ್ಯಾಪಿಸಲು ಆರಂಭವಾಗಿದೆ. ಚಿಕ್ಕಬಳ್ಳಾಪುರ, ಕೋಲಾರ, ಮೈಸೂರಿನಲ್ಲಿಯೂ ಧ್ವಜ ವಿವಾದದ ಕಿಡಿ ಹೊತ್ತಿಕೊಂಡಿದೆ. ಈ ಮಧ್ಯೆ, ಕೆರೆಗೋಡಿನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಕೆರೆಗೋಡಿನ ಎಲ್ಲ ಮನೆಗಳ ಮೇಲೆ ಹನುಮ ಧ್ವಜ ಹಾರಿಸಲು ಬಿಜೆಪಿ ಮುಂದಾಗಿದ್ದು, ಪೊಲೀಸ್ ಸರ್ಪಗಾವಲು ಮುಂದುವರಿದಿದೆ.

Mandya Flag Controversy: ಮಂಡ್ಯ ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ, ರಾಜ್ಯದ ಹಲವೆಡೆ ವ್ಯಾಪಿಸಿದ ಧ್ವಜ ವಿವಾದ
ಸಾಂದರ್ಭಿಕ ಚಿತ್ರ
Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Feb 01, 2024 | 6:55 AM

ಮಂಡ್ಯ, ಫೆಬ್ರವರಿ 1: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಆರಂಭವಾದ ಧ್ವಜ ವಿವಾದದ (Flag Controversy) ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಆದರೆ, ಈಗ ಆ ವಿವಾದ ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ಹಸಿರು ಬಾವುಟ ಇರುವ ಫೋಟೋಗಳನ್ನು ಪೋಸ್ಟ್​ ಮಾಡಿ ಜನ ಹಾಗೂ ಬಿಜೆಪಿ ನಾಯಕರು ಇದನ್ನು ಯಾಕೆ ಬಿಟ್ಟಿದ್ದೀರಿ ಎಂದು ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ. ಕೆರಗೋಡು (Keregodu) ಗ್ರಾಮದಲ್ಲಿ ಸದ್ಯ 200ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ದು, ನಿಷೇಧಾಜ್ಞೆ ಮುಂದುವರೆದಿದೆ. ಅತ್ತ ಪೊಲೀಸರ ಲಾಠಿ ಚಾರ್ಜ್‌‌ನಲ್ಲಿ ಗಾಯಗೊಂಡವರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಬುಧವಾರ ಭೇಟಿ ನೀಡಿ, ಧೈರ್ಯ ಹೇಳಿದ್ದಾರೆ.

ಪ್ರತಿಭಟನೆ ವೇಳೆ ಪೊಲೀಸರು ಕರೆದೊಯ್ದಿದ್ದ 9ನೇ ತರಗತಿ ಬಾಲಕನ ಮನೆಗೂ ಅವರು ತೆರಳಿದ್ದಾರೆ. ಈ ವೇಳೆ, ಅವರನ್ನ ತಡೆದ ಪೋಷಕರು ಯಾರೂ ಬರೋದು ಬೇಡ. ಯಾವ ಧ್ವಜವಾದ್ರೂ ಹಾರಾಡ್ಲಿ ನಮಗೇನು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 9 ರಂದು ನಡೆದ ಘಟನೆ ಖಂಡಿಸಿ ಬಜರಂಗದಳ ಮಂಡ್ಯ ನಗರ ಬಂದ್​​​​ಗೆ ಕರೆ ಕೊಟ್ಟಿದೆ. ನಾಳೆಯಿಂದ ಮನೆ ಮನೆ ಮೇಲೆ ಹನುಮ ಹಾಗೂ ಕೇಸರಿ ಧ್ವಜ ಹಾರಾಟ ಅಭಿಯಾನಕ್ಕೂ ತೀರ್ಮಾನಿಸಿದೆ. ಮತ್ತೊಂದೆಡೆ, ಈ ಘಟನೆ ಖಂಡಿಸಿ ಫೆಬ್ರವರಿ 7 ರಂದು ಸಮಾನ ಮನಸ್ಕ ವೇದಿಕೆ ಮಂಡ್ಯ ನಗರ ಬಂದ್​ಗೆ ಕರೆಕೊಟ್ಟಿದೆ.

ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟಿತೇ ಧ್ವಜ ವಿವಾದ?

ಮಂಡ್ಯದಲ್ಲಿ ಕಿಚ್ಚು ಹಚ್ಚಿದ್ದ ಧ್ವಜ ದಂಗಲ್ ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟಿತೇ ಎಂಬ ಅನುಮಾನ ಮೂಡಿದೆ. ಏಕೆಂದರೆ, ಚಿಕ್ಕಬಳ್ಳಾಪುರ ನಗರದ ದೊಡ್ಡಭಜನೆಯಲ್ಲಿ ಮನೆ ಕಾಂಪೌಂಡ್‌ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಿಸಲಾಗಿದೆ. ಇದನ್ನ ಗಮನಿಸಿದ ಸ್ಥಳೀಯರು ಕೂಡಲೇ ಹಸಿರು ಬಾವುಟ ತೆರವುಗೊಳಿಸಬೇಕು ಎಂದು ಆಗ್ರಹಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಕೆರಗೋಡುವಿನ ಎಲ್ಲ ಮನೆಗಳ ಮೇಲೆ ಹನುಮ ಧ್ವಜ ಹಾರುತ್ತೆ, ಸರ್ಕಾರಕ್ಕೆ ತಾಕತ್ತಿದ್ದರೆ ತಡೆಯಲಿ: ಮಂಡ್ಯ ಬಿಜೆಪಿ ಘಟಕ ಅಧ್ಯಕ್ಷ

ಸ್ಥಳೀಯರ ದೂರಿನ ಮೇರೆಗೆ ಸ್ಥಳಕ್ಕೆ ಪೊಲೀಸರು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ ಹಸಿರು ಬಾವುಟ ತೆರವುಗೊಳಿಸುವಂತೆ ಮನೆ ಮಾಲೀಕರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಕ್ಲಾಕ್ ಟವರ್ ಮೇಲಿನ ಅರ್ಧ ಚಂದ್ರ ಚಿಹ್ನೆ ತೆರವಿಗೆ ಆಗ್ರಹ!

ಕೆರಗೋಡಿನ ಧ್ವಜ ವಿವಾದದ ಬೆನ್ನಲ್ಲೇ ಕೋಲಾರದಲ್ಲೂ ವಿವಾದದ ಕಿಡಿ ಹೊತ್ತಿದೆ. ಕೋಲಾರದ ಕ್ಲಾಕ್ ಟವರ್​ ಮೇಲೆ ಹಾಕಲಾಗಿರುವ ಅರ್ಧ ಚಂದ್ರಾಕೃತಿ ಹಾಗೂ ನಕ್ಷತ್ರ ಆಕೃತಿ ಚಿಹ್ನೆ ತೆರವಿಗೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿಯೂ ಧ್ವಜ ವಿವಾದ ಸದ್ದು ಮಾಡುತ್ತಿದೆ. ಹಸಿರು ಬಾವುಟ ಇರುವ ಫೋಟೋ ಟ್ವೀಟ್ ಮಾಡಿದ ಸಂಸದ ಪ್ರತಾಪ್ ಸಿಂಹ, ಒಂದು ಬಾವುಟ ತೆಗೆದು ಇನ್ನೊಂದನ್ನೇಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಮೈಸೂರಿನ ಕೈಲಾಸಪುರಂನ ಅಂಬೇಡ್ಕರ್ ಪಾರ್ಕ್ ಬಳಿ ಧ್ವಜ ಇರೋದು ಕಾಣುತ್ತಿಲ್ಲವೇ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ