ಬೇಬಿ ಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ; ಸದ್ಯ ಕೆಆರ್​ಎಸ್ ಡ್ಯಾಂಗೆ ತೊಂದರೆ ಇಲ್ಲ: ನಾರಾಯಣ ಗೌಡ

ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆ ಡ್ಯಾಂ ಪರಿಶೀಲನೆ ನಡೆಸಲಾಗಿದೆ. ಈಗ ಮೂರು ವರದಿಗಳಿವೆ. ಡ್ಯಾಂಗೆ ಯಾವುದೇ ತೊಂದರೆ ಇಲ್ಲ. ಸಂಸದೆ ಸುಮಲತಾಗೂ ಈ ಬಗೆಗೆ ವರದಿ ನೀಡಿ ಮನವರಿಕೆ ಮಾಡಿಕೊಡಲಾಗುವುದು ಎಂದು ನಾರಾಯಣ ಗೌಡ ತಿಳಿಸಿದ್ದಾರೆ.

ಬೇಬಿ ಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ; ಸದ್ಯ ಕೆಆರ್​ಎಸ್ ಡ್ಯಾಂಗೆ ತೊಂದರೆ ಇಲ್ಲ: ನಾರಾಯಣ ಗೌಡ
ಸಚಿವ ಕೆ.ಸಿ. ನಾರಾಯಣ ಗೌಡ
Follow us
TV9 Web
| Updated By: ganapathi bhat

Updated on:Jul 12, 2021 | 5:40 PM

ಮಂಡ್ಯ: ಬೇಬಿ ಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ. ಕೆಆರ್​ಎಸ್ ಡ್ಯಾಂ ಸುರಕ್ಷತೆ ವಿಚಾರವಾಗಿ ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಇಂದು (ಜುಲೈ 12) ಹೀಗೆ ಹೇಳಿಕೆ ನೀಡಿದ್ದಾರೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದೇ ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಅವರಿಗೂ ಇದನ್ನು ಮನವರಿಕೆ ಮಾಡಿಕೊಡಲು ನಿರ್ಧಾರ ಕೈಗೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು. ಟ್ರಯಲ್ ಬ್ಲಾಸ್ಟ್ ನಡೆಸೋದು, ಮತ್ತೆ ಗಣಿಗಾರಿಕೆಗೆ ಅವಕಾಶ ಕೊಡೋದು, ಮತ್ತೆ ಡ್ಯಾಂ ಭದ್ರತೆ ಚರ್ಚೆ ವಿಚಾರ ಬಂದಾಗ ಏನ್ ಮಾಡೋದು ಎಂಬ ಗೊಂದಲಗಳು ಉಂಟಾಗುತ್ತದೆ. ಹಾಗಾಗಿ ಎಲ್ಲಾ ತಲೆನೋವು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದ್ದು, ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣವಾಗಿ ಮತ್ತು ಶಾಶ್ವತವಾಗಿ ನಿಲ್ಲಿಸಲು ಚಿಂತನೆ ನಡೆಸಲಾಗಿದೆ.

ಇದಕ್ಕೆ 08 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗುವುದು. ಹಾಗೂ ಸಕ್ರಮ ಗಣಿಗಾರಿಕೆಗೆ ತಕರಾರು ಇಲ್ಲ. ಈ ಸಂಬಂಧ ಕಂದಾಯ, ಗಣಿ, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆ ಡ್ಯಾಂ ಪರಿಶೀಲನೆ ನಡೆಸಲಾಗಿದೆ. ಈಗ ಮೂರು ವರದಿಗಳಿವೆ. ಡ್ಯಾಂಗೆ ಯಾವುದೇ ತೊಂದರೆ ಇಲ್ಲ. ಸಂಸದೆ ಸುಮಲತಾಗೂ ಈ ಬಗೆಗೆ ವರದಿ ನೀಡಿ ಮನವರಿಕೆ ಮಾಡಿಕೊಡಲಾಗುವುದು ಎಂದು ನಾರಾಯಣ ಗೌಡ ತಿಳಿಸಿದ್ದಾರೆ.

ಮತ್ತೊಂದೆಡೆ, ಕೆಆರ್​ಎಸ್ ಆಣೆಕಟ್ಟು ಬಿರುಕು ಸಂಬಂಧಿಸಿದಂಂತೆ ಮಂಡ್ಯ ಸಂಸದೆ ರಾಜ್ಯದ ಗಣಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿಯಾಗ ಚರ್ಚಿಸಿದ್ದಾರೆ. ಈ ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ, ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಅಂತ ಆರೋಪ ಕೇಳಿಬಂದಿದೆ. ಫೆಬ್ರವರಿಯಲ್ಲಿ ನಾನು ಮಂಡ್ಯದಲ್ಲಿ ಸ್ಥಳೀಯ ನಾಯಕರ ಸಭೆ ಮಾಡಿದ್ದೆ. ಅದೇ ದಿನ ವರದಿ ಬರೋವರೆಗೂ ಕೆ.ಆರ್‌.ಎಸ್. ಸುತ್ತ15 ಕಿಲೋಮೀಟರ್ ಗಣಿಗಾರಿಕೆ ಮಾಡಬಾರದು ಎಂಬ ಆದೇಶ ಮಾಡಿದ್ದೇನೆ. ಆದರೆ ಈಗ ಅಲ್ಲಿ ಕಳೆದ 3 ತಿಂಗಳಿಂದ ಯಾವುದೇ ಗಣಿಗಾರಿಕೆ ನಡೆಯದೇ ಸುಮಾರು 38 ಗಣಿಗಾರಿಕೆಗಳು ನಿಂತಿವೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಆದರೂ ಸಂಸದರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ. ಈ‌ ಬಗ್ಗೆ ಪರಿಶೀಲಿಸುತ್ತೇವೆ. ಮುಂದೆಯೂ ಡ್ಯಾಂಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

ಅಧಿಕಾರಿಗಳು ಕೊಡುವುದು ರಿಪೋರ್ಟ್; ನಮಗೆ ಬೇಕಾಗಿರುವುದು ಸರ್ಟಿಫಿಕೇಟ್: ಕೆಆರ್​ಎಸ್ ಡ್ಯಾಂ ಬಗ್ಗೆ ಪಟ್ಟು ಬಿಡದ ಸುಮಲತಾ

Published On - 5:23 pm, Mon, 12 July 21