AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ

ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 5 ಗಂಟೆಯಿಂದ 23ರ ಬೆಳಗ್ಗೆ 6 ಗಂಟೆಯವರೆಗೆ ಮಾರ್ಗ ಬದಲಾವಣೆಯಾಗಲಿದೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ
Express Way (2)
ಪ್ರಶಾಂತ್​ ಬಿ.
| Edited By: |

Updated on:Dec 19, 2024 | 9:06 AM

Share

ಮಂಡ್ಯ, ಡಿಸೆಂಬರ್ 19:   ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 5 ಗಂಟೆಯಿಂದ 23ರ ಬೆಳಗ್ಗೆ 6 ಗಂಟೆಯವರೆಗೆ ಮಾರ್ಗ ಬದಲಾವಣೆಯಾಗಲಿದೆ.

ಬೆಂಗಳೂರು, ರಾಮನಗರ, ತುಮಕೂರು, ಮದ್ದೂರು, ಮಳವಳ್ಳಿಯಿಂದ ಎಕ್ಸ್ ಪ್ರೆಸ್ ವೇನಲ್ಲಿ ಬರುವವರಿಗೆ ಹೊಸಬೂದನೂರು ಬಳಿ ಎಕ್ಸಿಟ್ ಆಗಿ  ಸರ್ವಿಸ್ ರಸ್ತೆ, ಸಮ್ಮೇಳನದ ಮುಖ್ಯ ದ್ವಾರದ ಮೂಲಕ ಬ್ಯಾಂಕರ್ಸ್ ಕಾಲೋನಿ ರಸ್ತೆ ಮೂಲಕ ಸಮ್ಮೇಳನ ಸ್ಥಳ ತಲುಪಬಹುದು.

ಮೈಸೂರು, ಶ್ರೀರಂಗಪಟ್ಟಣ, ಪಾಂಡವಪುರದಿಂದ ಎಕ್ಸ್ ಪ್ರೆಸ್ ವೇನಲ್ಲಿ ಬರುವವರಿಗೆ ಶಶಿಕಿರಣ ಕನ್ವೆನ್ ಷನ್ ಹಾಲ್ ಎದುರಿನಲ್ಲಿ ಎಕ್ಸಿಟ್ ಆಗಬೇಕು. ಸರ್ವಿಸ್ ರಸ್ತೆ ಮೂಲಕ ಹೊಸಬೂದನೂರು ಅಂಡರ್ ಪಾಸ್ ಮೂಲಕ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆ ಮೂಲಕ ಬ್ಯಾಂಕರ್ಸ್ ಕಾಲೋನಿ ಮೂಲಕ ಸಮ್ಮೇಳನ ಸ್ಥಳ ತಲುಪಬಹುದು.

ಮಂಡ್ಯದಿಂದ ಉಚಿತ ಸಾರಿಗೆ ಸೇವೆ ಮಂಡ್ಯದ ಕೆಎಸ್​ಆರ್​ಟಿಸಿ  ಬಸ್ ನಿಲ್ದಾಣದಿಂದ ಸಮ್ಮೇಳನಕ್ಕೆ ಉಚಿತ ಬಸ್ ಸೇವೆ ವ್ಯವಸ್ಥೆ ಮಾಡಲಾಗಿದೆ. ಸರ್ವಿಸ್ ರಸ್ತೆಗಳಲ್ಲಿ ದ್ವಿಮುಖ ಸಂಚಾರ ನಿರ್ಬಂಧಿಸಲಾಗಿದೆ. ಚಿಕ್ಕಮಂಡ್ಯದಿಂದ ಹನಕೆರೆವರೆಗಿನ ಎರಡೂ ಬದಿಯ ಸರ್ವಿಸ್ ರಸ್ತೆಯಲ್ಲಿ ದ್ವಿಮುಖ ಸಂಚಾರ ನಿರ್ಬಂಧಿಸಲಾಗಿದೆ.

ಮದ್ದೂರು ಮತ್ತು ಶ್ರೀರಂಗಪಟ್ಟಣ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬರುವ ವಾಹನಗಳು ಎಕ್ಸ್ ಪ್ರೆಸ್ ವೇನಲ್ಲಿ ಚಲಿಸುವುದು. ನಿರ್ಬಂಧಿತ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಮತ್ತಷ್ಟು ಓದಿ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಿ 20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ

ಲ್ಲದೇ ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಮಾಡಲಾಗಿದೆ.

ಕೆಆರ್​ಎಸ್ ಡ್ಯಾಂ ಮಾದರಿ ಪ್ರವೇಶದ್ವಾರ: ಸಮ್ಮೇಳನದ ವೇದಿಕೆ ಸ್ಥಳದಲ್ಲಿ ಕೆ.ಆರ್.ಎಸ್ ಅಣೆಕಟ್ಟೆ ಮಾದರಿಯ ಆಕರ್ಷಕ ಪ್ರವೇಶದ್ವಾರವನ್ನು ನಿರ್ಮಾಣ ಮಾಡಲಾಗಿದೆ. ಪ್ರಧಾನ ವೇದಿಕೆಯ ಈ ಪ್ರವೇಶ ದ್ವಾರದ ವಿನ್ಯಾಸವು 40 ಅಡಿ ಎತ್ತರ ಮತ್ತು ಬರೋಬ್ಬರಿ 300 ಅಡಿ ಅಗಲ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:01 am, Thu, 19 December 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ