ನಿರ್ಮಾಪಕ, ಮುಖ್ಯಮಂತ್ರಿ ಇದೀಗ ಮತ್ತೊಮ್ಮೆ ಸಂಸದ: ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಟೈಂ ​ಲೈನ್​

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪುತ್ರ ಸಂಸದ ಹೆಚ್​ಡಿ ಕುಮಾರಸ್ವಾಮಿ. ಇವರು ರಾಜಕೀಯದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಇವರದ್ದು ಪ್ರಾದೇಶಿಕ ಪಕ್ಷವಾಗಿದ್ದರೂ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ರಾಜ್ಯ ರಾಜಕಾರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ಇವರ ರಾಜಕೀಯ ಟೈಂ ಲೈನ್​ ಇಲ್ಲಿದೆ.

ನಿರ್ಮಾಪಕ, ಮುಖ್ಯಮಂತ್ರಿ ಇದೀಗ ಮತ್ತೊಮ್ಮೆ ಸಂಸದ: ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಟೈಂ ​ಲೈನ್​
ಹೆಚ್​ಡಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on:Jul 05, 2024 | 9:41 AM

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪುತ್ರ, ಮಾಜಿ ಮುಖ್ಯಮಂತ್ರಿ, ಕೇಂದ್ರದ ಹಾಲಿ ಸಚಿವರಾಗಿರುವ ಹೆಚ್​ಡಿ ಕುಮಾರಸ್ವಾಮಿ ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿದ್ದ ಕುಮಾರಸ್ವಾಮಿ ನಂತರ ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ ತಮ್ಮ 37ನೇ ವಯಸ್ಸಿನಲ್ಲಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.

2004ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದಾಗ ಹೆಚ್​ಡಿ ಕುಮಾರಸ್ವಾಮಿ ಅವರ ಜೆಡಿಎಸ್​ ಪಕ್ಷ ಕಾಂಗ್ರೆಸ್​ಗೆ ಬೆಂಬಲ ಸೂಚಿಸಿ, ಸರ್ಕಾರ ರಚಿಸುವಲ್ಲಿ ಯಶಸ್ವಿಯಾಯಿತು. 2006 ರ ಫೆಬ್ರುವರಿ 4ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹೆಚ್​ಡಿ ಕುಮಾರಸ್ವಾಮಿ 2007 ರ ಅಕ್ಟೋಬರ್ 8 ರವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆದರು. 2018 ರಂದು ಕರ್ನಾಟಕದ ಮುಖ್ಯಮಂತ್ರಿಯಾದರು. 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ 2024ರಲ್ಲಿ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:33 am, Wed, 5 June 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್