ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪುತ್ರ, ಮಾಜಿ ಮುಖ್ಯಮಂತ್ರಿ, ಕೇಂದ್ರದ ಹಾಲಿ ಸಚಿವರಾಗಿರುವ ಹೆಚ್ಡಿ ಕುಮಾರಸ್ವಾಮಿ ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿದ್ದ ಕುಮಾರಸ್ವಾಮಿ ನಂತರ ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್ಡಿ ಕುಮಾರಸ್ವಾಮಿ ತಮ್ಮ 37ನೇ ವಯಸ್ಸಿನಲ್ಲಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
2004ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದಾಗ ಹೆಚ್ಡಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಕಾಂಗ್ರೆಸ್ಗೆ ಬೆಂಬಲ ಸೂಚಿಸಿ, ಸರ್ಕಾರ ರಚಿಸುವಲ್ಲಿ ಯಶಸ್ವಿಯಾಯಿತು. 2006 ರ ಫೆಬ್ರುವರಿ 4ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹೆಚ್ಡಿ ಕುಮಾರಸ್ವಾಮಿ 2007 ರ ಅಕ್ಟೋಬರ್ 8 ರವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆದರು. 2018 ರಂದು ಕರ್ನಾಟಕದ ಮುಖ್ಯಮಂತ್ರಿಯಾದರು. 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ 2024ರಲ್ಲಿ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:33 am, Wed, 5 June 24