ಆತ್ಮಹತ್ಯೆ ಮಾಡಿಕೊಂಡ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ?

ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರುವಂತೆ ಮನವಿಯೊಂದಿಗೆ ವ್ಯಕ್ತಿ ಆತ್ಮ ಹತ್ಯೆ ಹಿನ್ನೆಲೆಯಲ್ಲಿ ಅಭಿಮಾನಿ ಕೊನೆಯಾಸೆ ಈಡೇರಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗುವ ನಿರೀಕ್ಷೆ ಇದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ?
ರಾಮಕೃಷ್ಣ (25)
Edited By: ಸಾಧು ಶ್ರೀನಾಥ್​

Updated on: Feb 18, 2021 | 12:19 PM

ಮಂಡ್ಯ: ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರುವಂತೆ Death Note ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆ ಅಭಿಮಾನಿಯ ಕೊನೆಯಾಸೆ ಈಡೇರಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಿದ್ದರಾಮಯ್ಯ, ಮಧ್ಯಾಹ್ನ 12.30ಕ್ಕೆ ಕೋಡಿ ದೊಡ್ಡಿಗೆ ತೆರಳುವ ಸಾಧ್ಯತೆಯಿದೆ. ಆತ್ಮಹತ್ಯೆ ಮಾಡಿಕೊಂಡ ರಾಮಕೃಷ್ಣ (25) ಪೆಟ್ರೋಲ್​ ಬಂಕ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಹಾಗೂ ನಟ ಯಶ್​ ಭಾಗವಹಿಸಬೇಕೆಂಬ ಕೋರಿಕೆಯೊಂದಿಗೆ ಜಿಲ್ಲೆಯ ಕೆರಗೋಡು ಹೋಬಳಿಯ ಕೋಡಿ ದೊಡ್ಡಿ ಗ್ರಾಮದ ಯುವಕ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ನನ್ನ ಕೊನೆ ಆಸೆ. ಈಡೇರಿಸಿ ಪ್ಲೀಸ್​ ಎಂದು ಮನವಿ ಮಾಡಿಕೊಂಡಿದ್ದರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯ ಕೊನೆ ಆಸೆಯನ್ನು ಈಡೇರಿಸಲು ಮಾಜಿ ಸಿಎಂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆದರೆ ನಟ ಯಶ್​ ಭೇಟಿ ನೀಡುವ ಬಗ್ಗೆ ಸದ್ಯಕ್ಕೆ ಮಾಹಿತಿಯಿಲ್ಲ.

ರಾಮಕೃಷ್ಣ ಡೆತ್​ನೋಟ್​ನಲ್ಲಿ, ನನ್ನನ್ನು ದಯವಿಟ್ಟು ಕ್ಷಮಿಸಿ ಬಿಡಿ. ಏಕೆಂದರೆ ನಿಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೀನಿ. ಅಮ್ಮನಿಗೆ ಒಬ್ಬ ಮಗನಾಗಿ, ಅಣ್ಣನಿಗೆ ತಮ್ಮನಾಗಿ, ಗೆಳೆಯರಿಗೆ ಒಂದೊಳ್ಳೆ ಸ್ನೇಹಿತನಾಗಿ, ನನ್ನ ಹುಡುಗಿಗೆ ಜೊತೆಗಾರನಾಗಿ, ಬಾಳ ಸಂಗಾತಿಯಾಗಲು ವಿಫಲನಾಗಿದ್ದೇನೆ. ಹಾಗಾಗಿ, ನಾನು ನಿಮ್ಮಿಂದ ದೂರವಾಗಬೇಕೆಂದು ತೀರ್ಮಾನಿಸಿ ನನ್ನ ಇಚ್ಛೆಯಂತೆ ಮರಣ ಹೊಂದುತ್ತಿದ್ದೇನೆ ಎಂದು ರಾಮಕೃಷ್ಣ ಪತ್ರದಲ್ಲಿ ಬರೆದುಕೊಂಡಿದ್ದರು.

ನನ್ನ ಅಂತ್ಯಕ್ರಿಯೆಗೆ ರಾಕಿಂಗ್ ಸ್ಟಾರ್ ಯಶ್ ಅಣ್ಣ ಭಾಗವಹಿಸಬೇಕು. ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸರ್​ರವರು ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕು. ಏಕೆಂದರೆ ನಿಮ್ಮಿಬ್ಬರ ಅಪ್ಪಟ ಅಭಿಮಾನಿ ನಾನು. ದಯವಿಟ್ಟು ಕೇಳಿಕೊಳ್ಳುತ್ತೇನೆ ನನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ. ನನ್ನ ಕೊನೆಯ ಆಸೆ ಈಡೇರಿಸಿ ಪ್ಲೀಸ್. ಮಾಧ್ಯಮ ಮಿತ್ರರು ಸಹ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದರು. 15 ವರ್ಷದ ಹಿಂದೆ ರಾಮ ಕೃಷ್ಣ ತಂದೆ ಚಂದ್ರು ಸಹ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಯುವಕ ಆತ್ಮಹತ್ಯೆ; ಸಿದ್ದರಾಮಯ್ಯ, ಯಶ್ ಅಂತ್ಯಸಂಸ್ಕಾರಕ್ಕೆ ಬರುವಂತೆ ಮನವಿ, 15 ವರ್ಷದ ಹಿಂದೆ ತಂದೆ ಸಹ ಆತ್ಮಹತ್ಯೆ..

Loading...
Unable to load recommendations.
Follow Us