AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿಗಾರಿಕೆ ನಿಲ್ಲದಿದ್ದಲ್ಲಿ ನಾನೂ ಸುಮಲತಾರ ಹಾದಿಯಲ್ಲೇ ಹೋರಾಡುವೆ: ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ

ಅಕ್ರಮ ಗಣಿಗಾರಿಕೆಗೆ ಅಧಿಕಾರಿಗಳೇ ಕಾರಣ. ಅಧಿಕಾರಿಗಳ ಸಹಕಾರ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಯಲು ಸಾಧ್ಯವಿಲ್ಲ. ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಗಣಿಗಾರಿಕೆ ಬೇಕು, ಎಲ್ಲಾ‌ ಕಡೆ ರಾಯಲ್ಟಿ ನೂರಾರು ಕೋಟಿ‌ ಲೆಕ್ಕದಲ್ಲಿ ದೊರೆತರೆ ನಮ್ಮಲ್ಲಿ ಒಂದೆರಡು ಕೋಟಿ ಲೆಕ್ಕದಲ್ಲಿದೆ ಎಂದು ಅವರು ತಿಳಿಸಿದರು.

ಅಕ್ರಮ ಗಣಿಗಾರಿಕೆ ನಿಲ್ಲದಿದ್ದಲ್ಲಿ ನಾನೂ ಸುಮಲತಾರ ಹಾದಿಯಲ್ಲೇ ಹೋರಾಡುವೆ: ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ
ಸಚಿವ ಕೆ.ಸಿ. ನಾರಾಯಣ ಗೌಡ
TV9 Web
| Edited By: |

Updated on: Jul 09, 2021 | 5:04 PM

Share

ಮಂಡ್ಯ: ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳಿಗೆ ಇಂದೇ ನೋಟಿಸ್ ಜಾರಿಗೊಳಿಸಲು ಮಂಡ್ಯ ಜಿಲ್ಲಾಧಿಕಾರಿಗೆ ಸೂಚನೆ ನೀಡುತ್ತೇನೆ ಎಂದು ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಹಿಂದಿನ ಅಧಿಕಾರಿ ಅಕ್ರಮ ಗಣಿಗಾರಿಕೆಗೆ ಸಾಥ್ ನೀಡಿದ್ದರು. ಈಗಿರುವ ಅಧಿಕಾರಿಗಳೂ ಅದೇ ಹಾದಿ ಹಿಡಿದಿದ್ದರೆ ಅವರಿಗೆ ನೋಟಿಸ್ ನೀಡುತ್ತೇವೆ. ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಸಚಿವರ ಜತೆ ಮಾತನಾಡುತ್ತೇನೆ. ಅಕ್ರಮ ಗಣಿಗಾರಿಕೆ ಪಟ್ಟಿ ಕೊಡಲು ತಿಂಗಳಿಂದ ಕೇಳುತ್ತಿದ್ದೇನೆ. ಈ ಅಕ್ರಮ‌ ನಿಲ್ಲದೇ ಇದ್ದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಾದಿಯಲ್ಲೇ ಹೋರಾಟ ನಡೆಸುತ್ತೇನೆ ಎಂದು ಹೇಳಿದ ಅವರು, ಅಗತ್ಯ ಬಿದ್ದರೆ ಅಕ್ರಮ ಗಣಿಗಾರಿಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆಗೆ ಅಧಿಕಾರಿಗಳೇ ಕಾರಣ. ಅಧಿಕಾರಿಗಳ ಸಹಕಾರ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಯಲು ಸಾಧ್ಯವಿಲ್ಲ. ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಗಣಿಗಾರಿಕೆ ಬೇಕು, ಎಲ್ಲಾ‌ ಕಡೆ ರಾಯಲ್ಟಿ ನೂರಾರು ಕೋಟಿ‌ ಲೆಕ್ಕದಲ್ಲಿ ದೊರೆತರೆ ನಮ್ಮಲ್ಲಿ ಒಂದೆರಡು ಕೋಟಿ ಲೆಕ್ಕದಲ್ಲಿದೆ. ಅಕ್ರಮ ಗಣಿಗಾರಿಕೆ ಬಗೆಗೆ ಪಟ್ಟಿಕೊಡಿ ಎಂದು ನಾನು ಒಂದು ತಿಂಗಳಿನಿಂದ ಕೇಳ್ತಿದ್ದೀನಿ ಕೊಟ್ಟಿಲ್ಲ. ಅಕ್ರಮ‌ ಗಣಿಗಾರಿಕೆ ನಿಲ್ಲದೆ ಇದ್ರೆ ನಾನು ಸುಮಲತಾರ ಹಾದಿಯಲ್ಲೇ ಹೋರಾಟ ಮಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: 

ಪದೇ ಪದೇ ನನ್ನ ತಂದೆಯ ಸಾವಿನ ವಿಚಾರ ತರಬೇಡಿ: ಅಭಿಷೇಕ್ ಅಂಬರೀಶ್ ಎಚ್.ಡಿ.ಕುಮಾರಸ್ವಾಮಿಗೆ ಮನವಿ

ನನ್ನ- ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು: ಅಂಬರೀಷ್ ಕುಟುಂಬದ ಅತ್ಯಾಪ್ತ ರಾಕ್​ಲೈನ್ ವೆಂಕಟೇಶ್

(Mandya Minister Narayana Gowda says I will fight on the path of MP Sumalatha Ambarish if illegal mining is not stopped)

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು