ಮಂಡ್ಯ ಮೈ ಶುಗರ್ ಕಾರ್ಖಾನೆಯ 25 ವರ್ಷದ ವಿದ್ಯುತ್ ಬಿಲ್ ಮನ್ನಾ: ಎಷ್ಟು ಕೋಟಿ ರೂ ಬಾಕಿ ಇತ್ತು ಗೊತ್ತಾ?

ಮಂಡ್ಯ ಜಿಲ್ಲೆಯ ಮೈ ಶುಗರ್ ಫ್ಯಾಕ್ಟರಿಯು ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಬಾಕಿ ಇರುವ ವಿದ್ಯುತ್ ಬಿಲ್ 52.25 ಕೋಟಿ ರೂ. ಮನ್ನಾ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಹೀಗಾಗಿ ಕಡತ ಮಂಡನೆಗೆ ಸಿಎಂ ಸೂಚಿಸಿದ್ದಾರೆ.

ಮಂಡ್ಯ ಮೈ ಶುಗರ್ ಕಾರ್ಖಾನೆಯ 25 ವರ್ಷದ ವಿದ್ಯುತ್ ಬಿಲ್ ಮನ್ನಾ: ಎಷ್ಟು ಕೋಟಿ ರೂ ಬಾಕಿ ಇತ್ತು ಗೊತ್ತಾ?
ಮಂಡ್ಯ ಮೈ ಶುಗರ್ ಕಾರ್ಖಾನೆಯ 25 ವರ್ಷದ ವಿದ್ಯುತ್ ಬಿಲ್ ಮನ್ನಾ, ಎಷ್ಟು ಕೋಟಿ ರೂ ಬಾಕಿ ಇತ್ತು ಗೊತ್ತಾ?
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jul 07, 2024 | 6:30 PM

ಬೆಂಗಳೂರು, ಜುಲೈ 07: ಮೈಶುಗರ್ ಕಾರ್ಖಾನೆ (MySugar) ವಿದ್ಯುತ್ ಬಿಲ್ ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡನೆಗೆ ಹಣಕಾಸು ಇಲಾಖೆ ಅಪರ‌ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ. ಮೈಸೂರು ಸಕ್ಕರೆ ಕಾರ್ಖಾನೆ ವಿದ್ಯುತ್ ಬಿಲ್‌ ಮನ್ನಾಕ್ಕೆ ಸಚಿವ ಸಂಪುಟದ ಅನುಮೋದನೆ ಅಗತ್ಯ ಹೀಗಾಗಿ ಸಚಿವ ಸಂಪುಟ ಸಭೆಗೆ ಪ್ರಸ್ತಾಪ ಮಂಡಿಸಲು ಸಿಎಂ ಸೂಚಿಸಿದ್ದಾರೆ. ಮಂಡ್ಯ ಮೈ ಶುಗರ್ ಕಾರ್ಖಾನೆ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. ಹೀಗಾಗಿ 52.25 ಕೋಟಿ ರೂ. ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಮೈಶುಗರ್ ಸಕ್ಕರೆ ಕಾರ್ಖಾನೆಗೆ ನೋಟಿಸ್ ನೀಡಿತ್ತು‌. ರೈತರ ಹಿತ ದೃಷ್ಟಿಯಿಂದ‌ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.

ಮನವಿ ಪತ್ರದಲ್ಲೇನಿತ್ತು?

ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, 1932 ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮ್ಮೆಯಾಗಿದೆ. ಆದರೆ, ಇದೀಗ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್ ಬಿಲ್ 52.25 ಕೋಟಿ ರೂ. ಮನ್ನಾ ಮಾಡಬೇದೆ ಹಲವು ವರ್ಷಗಳಿಂದ ಹಲವಾರು ಕಾರಣಗಳಿಂದಾಗಿ ಬಂದ್ ಆಗಿದ್ದ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು.

ಇದನ್ನೂ ಓದಿ: ಕೇಂದ್ರ ಹಾಗೂ ರಾಜ್ಯ ಸಚಿವರ ನಡುವೆ ಜಟಾಪಟಿ: ಮಂಡ್ಯದಲ್ಲಿ ನೂತನ ಸಕ್ಕರೆ ಕಾರ್ಖಾನೆಗೆ ವಿರೋಧ

ರಾಜ್ಯ ಸರ್ಕಾರ ಕಾರ್ಖಾನೆ ಪ್ರಾರಂಭೋತ್ಸವ, ಹಾಗೂ ಗ್ಯಾಂಗ್​ಗಳಿಗೆ ನೀಡಲು 15 ಕೋಟಿ ರೂ. ದುಡಿಯುವ ಬಂಡವಾಳಕ್ಕಾಗಿ (ವರ್ಕಿಂಗ್ ಕ್ಯಾಪಿಟಲ್) 35 ಕೋಟಿ ರೂ.ಸೇರಿ ಒಟ್ಟಾರೆ 50 ಕೊಟಿ ರೂ.ಗಳನ್ನು ಕಾರ್ಖಾನೆಯ ಪುನಶ್ಚೇತನಕ್ಕೆ ನೀಡಲಾಗಿದೆ. ಪರಿಣಾಮ ಕಳೆದ ವರ್ಷ ಕಾರ್ಖಾನೆಯು ಮಂಡ್ಯದ ರೈತರು ಬೆಳೆದ 2 ಲಕ್ಷ 41 ಸಾವಿರ ಟನ್ ಕಬ್ಬನ್ನು ನುರಿಸಲಾಗಿತ್ತು. ರೈತರಿಗೆ ಕಬ್ಬಿನ ಹಣ ಪಾವತಿಯಾಗಿದೆ. ಕಾರ್ಖಾನೆಯಿಂದ ರೈತರಿಗೆ ತುಂಬಾ ಅನುಕೂಲವಾಗುತ್ತಿದೆ. ಈ ವರ್ಷ ಕನಿಷ್ಠ 2 ಲಕ್ಷ 5 ಸಾವಿರ ಟನ್ ಕಬ್ಬನ್ನು ನುರಿಸುವ ಸಂಬಂಧ ರೈತರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: MySugar Factory: ಕಬ್ಬು ಅರೆಯಲು ಮಂಡ್ಯ ಮೈಶುಗರ್ ಸಜ್ಜು: ಜೂ. 23 ರಿಂದ ಮತ್ತೆ ಆರಂಭ

ಆದರೆ, ಕಾರ್ಖಾನೆ ಕೆಲವು ಅನಿವಾರ್ಯ ಕಾರಣಗಳಿಂದ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇರುವ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕಾರ್ಖಾನೆಗೆ ನೋಟಿಸ್ ನೀಡಿದೆ. ವಿದ್ಯುತ್ ಪಾವತಿ ಮಾಡುವಂತೆ ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ಸಮರ್ಪಕವಾಗಿಲ್ಲ. ಕೋಟ್ಯಂತರ ರೂ. ನಷ್ಟದಲ್ಲಿದೆ. ಅಷ್ಟೊಂದು ಹಣವನ್ನು ವಿದ್ಯುತ್ ಬಿಲ್​ಗೆ ಪಾವತಿಸಿದರೆ, ಈ ಹಂಗಾಮಿನಲ್ಲಿ ಕಬ್ಬು ನುರಿಸುವುದೇ ಕಷ್ಟವಾಗಬಹುದು. ಇದರಿಂದ‌ ಈಗಾಗಲೇ ಕಾರ್ಖಾನೆ ನಂಬಿ ಕಬ್ಬು ಬೆಳೆದಿರುವ ರೈತರಿಗೆ ನಷ್ಟವಾಗಬಹುದು ಎಂದು ದಿನೇಶ್ ಗೂಳಿಗೌಡ ಅವರು ಮನವಿ ಪತ್ರದಲ್ಲಿ ಸಮಸ್ಯೆಗಳ ತೀವ್ರತೆಯನ್ನು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ