Mandya: ಕುಮಾರಸ್ವಾಮಿ ಜೊತೆ ವೇದಿಕೆ ಹಂಚಿಕೊಂಡ ಡಾ. ರವೀಂದ್ರ: ಕಾಂಗ್ರೆಸ್ಗೆ ಬಿಗ್ ಶಾಕ್
ಇತ್ತೀಚೆಗೆ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ರವೀಂದ್ರ, ಇದೀಗ ಇವತ್ತು ಶ್ರೀರಂಗಪಟ್ಟಣದಲ್ಲಿ ನಡೆದ ಮೈತ್ರಿ ಸಮಾವೇಶದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಆ ಮೂಲಕ ಕಾಂಗ್ರೆಸ್ಗೆ ಬಿಗ್ ಶಾಕ್ ಎದುರಾಗಿದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಮಂಡ್ಯ, ಏಪ್ರಿಲ್ 21: ಲೋಕಸಭಾ ಚುನಾವಣಾ (Lok Sabha Elections) ಮತದಾನಕ್ಕೆ ಇನ್ನೇನೂ ಐದು ದಿನ ಬಾಕಿ ಇದೆ. ಈ ಮಧ್ಯೆ ಸಕ್ಕರಿನಗರಿ ಮಂಡ್ಯದಲ್ಲಿ ಚುನಾವಣಾ ಕಾವು ಬಿಸಿಲಿನಷ್ಟೇ ಕಾವೇರಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ಮತಶಿಕಾರಿ ನಡೆಸುತ್ತಿದ್ದು, ಒಬ್ಬರ ಮೇಲೆ ಆರೋಪ, ಪ್ರತ್ಯಾರೋಪ ಕೂಡ ನಡೆಸುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ರವೀಂದ್ರ (Dr. Ravindra) ವೇದಿಕೆ ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಗೆ ಬಿಗ್ ಶಾಕ್ ನೀಡಿದ್ದಾರೆ. ಅಷ್ಟೇ ಅಲ್ಲದೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಇತ್ತೀಚೆಗೆ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಡಾ ರವೀಂದ್ರ, ಇದೀಗ ಇವತ್ತು ಶ್ರೀರಂಗಪಟ್ಟಣದಲ್ಲಿ ನಡೆದ ಮೈತ್ರಿ ಸಮಾವೇಶದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.
ಕಾವೇರಿ ಸಮಸ್ಯೆ ಬಗೆಹರಿಸದಿದ್ದರೇ ನಿಮ್ಮ ಬಳಿ ಮತ ಕೇಳಲ್ಲ ಎಂದ ಹೆಚ್ಡಿ ಕುಮಾರಸ್ವಾಮಿ
ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಬೇಟೆ ನಡೆಸುತ್ತಿರುವ ಹೆಚ್ಡಿ ಕುಮಾರಸ್ವಾಮಿ ಇಂದು ಶ್ರೀರಂಗಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಸಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದು, ಮುಂದಿನ ಐದು ವರ್ಷಗಳಲ್ಲಿ ಕಾವೇರಿ ಸಮಸ್ಯೆ ಬಗೆಹರಿಸದಿದ್ದರೇ ನಿಮ್ಮ ಬಳಿ ಮತ ಕೇಳಲು ಬರುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಪ್ರಚಾರದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಜನ ಕೊಟ್ಟ ಶಕ್ತಿಯಿಂದ ರೈತರ ಸಾಲಮನ್ನಾ ಮಾಡಲು ಸಾಧ್ಯವಾಯ್ತು. ಕಾಂಗ್ರೆಸ್‌ನ ಅಸಹಕಾರದ ನಡುವೆಯೂ ರೈತರ ಸಾಲಮನ್ನಾ ಮಾಡಿದೆ. FDAಗಿಂತಲೂ ನನ್ನನ್ನು ಕಾಂಗ್ರೆಸ್ನವರು ಕೀಳಾಗಿ ಕಂಡರು. ಕಾಂಗ್ರೆಸ್ನವರು ನನಗೆ ತುಂಬಾ ಅವಮಾನ ಮಾಡಿದರು. ನೀವೇನು ಕೊಟ್ಟಿದ್ದೀರಿ ಡಿ.ಕೆ.ಶಿವಕುಮಾರ್ ಅವರೇ ಎಂದು ಪ್ರಶ್ನಿಸಿದರು.
ನಮ್ಮ ನೀರು ನಮ್ಮ ಹಕ್ಕು ಅಂತಾ ಹೋರಾಟ ಮಾಡಿದ್ರಿ. ನಮ್ಮ ನೀರು ತಮಿಳುನಾಡಿನ ಹಕ್ಕು ಅಂತಾ ನೀರು ಬಿಟ್ರಿ. ಭತ್ತ ಬೆಳೆಯಬೇಡಿ ಎಂದು ಹೇಳಿದ ಕೃಷಿ ಸಚಿವ ಯಾರು. ಇದಕ್ಕೇನಾ ನಿಮಗೆ ಜನ ಅಧಿಕಾರ ಕೊಟ್ಟಿರೋದು. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ ಎಂದ ಕೇಳ್ತಿದ್ದೀರಿ. ನೀವು ಅಧಿಕಾರದಲ್ಲಿ ಇರೋದು ಯಾವುದಕ್ಕೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ: ಸ್ಪಷ್ಟನೆ ನೀಡಿದ ಸುಮಲತಾ
ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು, ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭರ್ಜರಿ ಮತಬೇಟೆ ನಡೆಸಿದ್ದಾರೆ. ಇವತ್ತು ಕೆಆರ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಶಿಕಾರಿ ನಡೆಸಿದರು. ಸ್ಥಳೀಯ ಶಾಸಕ ರವಿಶಂಕರ್ ಸಾಥ್ ನೀಡಿದರು. ಇನ್ನು ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸುದ್ದಿಗೋಷ್ಟಿ ನಡೆಸಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:43 pm, Sun, 21 April 24