ಎರಡು ವರ್ಷಗಳ ಬಳಿಕ ಕೆಆರ್​ಎಸ್ ಜಲಾಶಯ ಭರ್ತಿ: ನಾಳೆ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 28, 2024 | 10:21 PM

ಎರಡು ವರ್ಷಗಳ ನಂತರ ಭರ್ತಿಯಾದ ಮಂಡ್ಯ ಜಿಲ್ಲೆಯ ಕೆಆರ್​ಎಸ್​ ಜಲಾಶಯಕ್ಕೆ ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ರಿಂದ ಬಾಗಿನ ಅರ್ಪಣೆ ಮಾಡಲಿದ್ದಾರೆ. ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಳಿಕ ಬಾಗಿನ ಅರ್ಪಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಎರಡು ವರ್ಷಗಳ ಬಳಿಕ ಕೆಆರ್​ಎಸ್ ಜಲಾಶಯ ಭರ್ತಿ: ನಾಳೆ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ
ಎರಡು ವರ್ಷಗಳ ಬಳಿಕ ಕೆಆರ್​ಎಸ್ ಜಲಾಶಯ ಭರ್ತಿ: ನಾಳೆ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ
Follow us on

ಮಂಡ್ಯ, ಜುಲೈ 28: ಕಾವೇರಿ ಜಲಾನಯನ (Kaveri River) ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದಾಳೆ. ಅಷ್ಟೇ ಅಲ್ಲ ನದಿ ತಟದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಠಿ ಆಗಿದೆ. ಈ ಮಧ್ಯೆ ಸಂಪೂರ್ಣ ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟಿಗೆ ನಾಳೆ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಭಾಗಿನ ಅರ್ಪಿಸಲಿದ್ದಾರೆ‌.

ಜಿಲ್ಲೆಯ ಕೆಆರ್​ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ‌ ನದಿಗೆ ಒಂದು ಲಕ್ಷ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನ ಹರಿಬಿಡಲಾಗಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ; ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಅಷ್ಟೇ ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಟಿ ಆಗಿದೆ. ಇನ್ನು ಕಾವೇರಿ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಜಲಾವೃತವಾದರೇ, ನೂರಾರು ವರ್ಷಗಳ ಇತಿಹಾಸ ಇರುವ ವೆಲ್ಲಾಸ್ಲೆ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ಅಲ್ಲದೆ ರಸ್ತೆಗೂ ಕೂಡ ನದಿ‌ ನೀರು ನುಗ್ಗಿದೆ.

ನಾಳೆ ಸಿಎಂ ಸಿದ್ದರಾಮಯ್ಯರಿಂದ ಕೆಆರ್​ಎಸ್​ಗೆ ಬಾಗಿನ ಅರ್ಪಣೆ

ಎರಡು ವರ್ಷಗಳ ನಂತರ ಹಳೇ ಮೈಸೂರು ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್​ಗೆ ಬಾಗಿನ ಅರ್ಪಿಸುತ್ತಿದ್ದಾರೆ.

ಇದನ್ನೂ ಓದಿ: ಕೆಆರ್​ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ

ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ ಅಂದರೆ ಕಳೆದ ವರ್ಷ ಕೂಡ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲ್ಲ. ಇದೀಗ ಮತ್ತೆ ಸಿಎಂ ಆಗಿರುವಾಗಲೇ ಭರ್ತಿಯಾಗಿದೆ. ಹೀಗಾಗಿ ಜಿಲ್ಲಾಡಳಿತ ಎಲ್ಲ ಸಿದ್ದತೆ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 pm, Sun, 28 July 24