ದರ್ಶನ್ ಗ್ಯಾಂಗ್​​ನಿಂದ ಪೊಲೀಸ್ ಪೇದೆ ಮೇಲೆ ನಡೆದಿತ್ತು ಹಲ್ಲೆ? ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಮೇಲೆ ದರ್ಪ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರ ಗೌಡ ಜೈಲು ಪಾಲಾಗಿದ್ದಾರೆ. ನಟ ದರ್ಶನ್ ಮತ್ತು ಗ್ಯಾಂಗ್​ ಅನ್ನು ಮತ್ತೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಇದರ ಮಧ್ಯೆ ದರ್ಶನ್​ ಗ್ಯಾಂಗ್​ನ ಒಂದೊಂದೆ ಕರಾಳ ಮುಖಗಳು ಕೂಡ ಹೊರಗೆ ಬರುತ್ತಿವೆ. ಇದೀಗ ಮಂಡ್ಯದಲ್ಲಿ ಪೊಲೀಸ್ ಪೇದೆ ಮೇಲೆ ದರ್ಪ ಮೆರೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ದರ್ಶನ್ ಗ್ಯಾಂಗ್​​ನಿಂದ ಪೊಲೀಸ್ ಪೇದೆ ಮೇಲೆ ನಡೆದಿತ್ತು ಹಲ್ಲೆ? ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಮೇಲೆ ದರ್ಪ
ದರ್ಶನ್ ಗ್ಯಾಂಗ್​​ನಿಂದ ಪೊಲೀಸ್ ಪೇದೆ ಮೇಲೆ ನಡೆದಿತ್ತು ಹಲ್ಲೆ? ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಮೇಲೆ ದರ್ಪ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on: Jun 20, 2024 | 7:07 PM

ಮಂಡ್ಯ, ಜೂನ್​ 20: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Chitradurga Renukaswamy Murder Case) ಸಂಬಂಧಪಟ್ಟಂತೆ ನಟ ದರ್ಶನ್ (Darshan) ಮತ್ತು ಗ್ಯಾಂಗ್​ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಂತರ ಡಿ ಗ್ಯಾಂಗ್​ನ ಒಂದೊಂದೆ ಕರಾಳ ಮುಖಗಳು ಕೂಡ ಹೊರಗೆ ಬರುತ್ತಿದೆ. ಅದರಂತೆ ಚುನಾವಣಾ ಪ್ರಚಾರದ ವೇಳೆ ಡಿ ಗ್ಯಾಂಗ್ ಸದಸ್ಯರು ಪೊಲೀಸ್ ಪೇದೆ ಮೇಲೆ ದರ್ಪ ಮೆರೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಅಂದಹಾಗೆ ಇತ್ತಿಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ಮಾಡಿದ್ದರು. ಅದರಂತೆ ಏಪ್ರಿಲ್ 22 ರಂದು ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೂಡ ಪ್ರಚಾರ ಮಾಡುತ್ತಿದ್ದ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರನ್ನ ದರ್ಶನ್ ಹತ್ತಿರ ಕಳುಹಿಸಿದ್ದಾನೆ ಎಂದು ಶಾಸಕ ಉದಯ್ ಗನ್ ಮ್ಯಾನ್ ಆಗಿದ್ದ ನಾಗೇಶ್ ಹಾಗೂ ನಟ ದರ್ಶನ್​ನ ಶಿಷ್ಯರಾದ ಲಕ್ಷಣ ಹಾಗೂ ಮಣಿ ಎಂಬಾತನ ನಡುವೆ ಮಾತಿನ ಚಕಮಕಿ ನಡೆದಿತ್ತು.

ಇದನ್ನೂ ಓದಿ: ದರ್ಶನ್​ ಹೀರೋ ಅಲ್ಲ.. ಖಳನಾಯಕ! ಮಂಡ್ಯ ರೈತರ ಆಕ್ರೋಶ ನೋಡಿ

ಆದಾದ ಬಳಿಕ ರಾತ್ರಿ 11.30ರ ಸುಮಾರಿಗೆ ಮದ್ದೂರು ತಾಲೂಕಿನ ಕದಲೂರು ಗ್ರಾಮದ ಶಾಸಕ ಉದಯ್ ಮನೆ ಬಳಿ ಮಣಿ ಹಾಗೂ ಲಕ್ಷಣ್ ಎಂಬುವವರು, ಗನ್ ಮ್ಯಾನ್ ನಾಗೇಶ್​ ಎಂಬಾತನನ್ನ ಮನೆಯಿಂದ ಕರೆದುಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ಗನ್ ಮ್ಯಾನ್ ನಾಗೇಶ್ ಮದ್ದೂರಿನ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ, ಎಂಎಲ್​ಸಿ ಕೂಡ ಮಾಡಿಸಿದ್ದ.

ಇನ್ನು ಆ ನಂತರ ಕೆಸ್ತೂರು ಠಾಣೆಗೆ ದೂರು ನೀಡಲು ಸಹ ಗನ್ ಮ್ಯಾನ್ ನಾಗೇಶ್ ಮುಂದಾಗಿದ್ದರು. ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶಾಸಕ ಉದಯ್ ರಾಜಿ ಮಾಡಿ, ಪ್ರಕರಣ ದಾಖಲಾಗದಂತೆ ನೋಡಿಕೊಂಡಿದ್ದರು. ಹೀಗಾಗಿ ಗನ್ ಮ್ಯಾನ್ ನಾಗೇಶ್ ದೂರು ಸಹ ನೀಡಿರಲಿಲ್ಲ. ಆನಂತರ ಡಿಎಆರ್ ಪೇದೆ ನಾಗೇಶ್ ನನ್ನ ಗನ್ ಮ್ಯಾನ್​ನಿಂದ ತೆಗೆದಿದ್ದರು. ಹೀಗಾಗಿ ಮೂಲ ಸ್ಥಾನ ಡಿಎಆರ್​ಗೆ ನಾಗೇಶ್ ಬಂದಿದ್ದ. ಆದರೆ ಇದೀಗ ಡಿ ಗ್ಯಾಂಗ್​ನ ಕೌರ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Breaking: ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಜೈಲು ಪಾಲು

ಪ್ರಕರಣ ಸಂಬಂಧ ಡಿಎ ಆರ್ ಪೇದೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅತ್ತ ಶಾಸಕ ಉದಯ್ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ. ಒಟ್ಟಾರೆ ಡಿ ಗ್ಯಾಂಗ್​​ನ ದರ್ಪ ಅನೇಕ ಕಡೆಗಳಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್