AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ವಿವಿಯಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅ. 27 ಕೊನೆಯ ದಿನಾಂಕ

ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನ ನಿರ್ಮಿಸಲು ಬಯಸುವವರಿಗೆ ಶುಭ ಸುದ್ದಿ ಇಲ್ಲಿದೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಮಾಸಿಕ 28,000 ರೂ. ವರೆಗೆ ವೇತನ ದೊರೆಯಲಿದ್ದು, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 27 ರೊಳಗೆ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ವಿವರ ಇಲ್ಲಿದೆ.

ಮಂಡ್ಯ ವಿವಿಯಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅ. 27 ಕೊನೆಯ ದಿನಾಂಕ
ಸರ್ಕಾರಿ ಉದ್ಯೋಗImage Credit source: Getty Images
ಅಕ್ಷತಾ ವರ್ಕಾಡಿ
|

Updated on: Oct 24, 2026 | 4:22 PM

Share

ಸರ್ಕಾರಿ ಉದ್ಯೋಗ ಅಥವಾ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧನಾ ವೃತ್ತಿಯನ್ನು ಆಕಾಂಕ್ಷಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಮಂಡ್ಯ ವಿಶ್ವವಿದ್ಯಾಲಯವು (Mandya University) ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 4 ಅತಿಥಿ ಉಪನ್ಯಾಸಕ (Guest Faculty) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಮಂಡ್ಯದಲ್ಲಿ ಕೆಲಸ ಮಾಡಲು ಬಯಸುವ ಮತ್ತು ಅಗತ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಹುದ್ದೆಗಳ ವಿವರ ಮತ್ತು ವಿಭಾಗವಾರು ಮಾಹಿತಿ:

ಮಂಡ್ಯ ವಿಶ್ವವಿದ್ಯಾಲಯದ ಅಧಿಸೂಚನೆಯಂತೆ ಒಟ್ಟು 4 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ವಿವಿಧ ನಾಲ್ಕು ವಿಷಯಗಳಲ್ಲಿ ಭರ್ತಿ ಮಾಡಲಾಗುತ್ತಿದೆ. ಇದರಡಿ ಕಾಮರ್ಸ್ (Commerce) ವಿಭಾಗದಲ್ಲಿ 1 ಹುದ್ದೆ, ಸೋಶಿಯಲ್ ವರ್ಕ್ (M.S.W) ವಿಭಾಗದಲ್ಲಿ 1 ಹುದ್ದೆ, ಶುಗರ್ ಟೆಕ್ನಾಲಜಿ (Sugar Technology) ವಿಭಾಗದಲ್ಲಿ 1 ಹುದ್ದೆ ಹಾಗೂ ಪಾಲಿಮರ್ ಸೈನ್ಸ್ (Polymer Science) ವಿಭಾಗದಲ್ಲಿ 1 ಹುದ್ದೆಯನ್ನು ಕಾಯ್ದಿರಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವೇತನ ವಿವರ:

ಅಭ್ಯರ್ಥಿಗಳು ವಿಶ್ವವಿದ್ಯಾಲಯದ ನಿಯಮಾನುಸಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ (PG) ಪಡೆದಿರಬೇಕು. ಇದರೊಂದಿಗೆ NET, SLET, KSET ಅಥವಾ Ph.D ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಡ್ಯ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಮಾಸಿಕ ರೂ. 16,000 ದಿಂದ ರೂ. 28,000 ವರೆಗೆ ವೇತನ ದೊರೆಯಲಿದೆ.

ಇದನ್ನೂ ಓದಿ: 68ರ ವಯಸ್ಸಿನಲ್ಲೂ ಕಲಿಕೆಯ ಉತ್ಸಾಹ; ನಿವೃತ್ತ ಅಧಿಕಾರಿ ಈಗ ಸೈಕಾಲಜಿ ಸ್ಟೂಡೆಂಟ್!

ಅರ್ಜಿ ಶುಲ್ಕದ ವಿವರಗಳು:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ನಿಗದಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ ಅಭ್ಯರ್ಥಿಗಳಿಗೆ (General) ಅರ್ಜಿ ಶುಲ್ಕವು 500 ರೂ. ಇರುತ್ತದೆ. ಹಾಗೆಯೇ ಎಸ್‌ಸಿ, ಎಸ್‌ಟಿ ಮತ್ತು ಪ್ರವರ್ಗ-1 (SC/ ST/ Cat-1) ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ಸೂಚನೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಂಡ್ಯ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯಲ್ಲಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿಯನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳು, ಅಂಕಪಟ್ಟಿಗಳು ಮತ್ತು ವಿವರವಾದ ಬಯೋ-ಡಾಟಾದೊಂದಿಗೆ ಎರಡು (02) ಸೆಟ್‌ಗಳಲ್ಲಿ ಸಿದ್ಧಪಡಿಸಬೇಕು. ನಂತರ ಅದನ್ನು “ಕುಲಸಚಿವರು, ಮಂಡ್ಯ ವಿಶ್ವವಿದ್ಯಾಲಯ” ಇವರಿಗೆ ಅಕ್ಟೋಬರ್ 27 ರೊಳಗೆ ತಲುಪುವಂತೆ ಕಳುಹಿಸಬೇಕು. ಸರಿಯಾದ ದಾಖಲೆಗಳಿಲ್ಲದ ಮಾಹಿತಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್​ ಮಾಡಿ(Mandya-University-Recruitment-2026)

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು