AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಗುಟ್ಟು ರಟ್ಟು: ಗಂಡನ ಜಿಮ್‌ ಸೆಂಟರ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಅಪ್ಪ ಹಾಕಿದ ಆಲದ ಮರಕ್ಕೆ, ನೇಣು ಹಾಕಿಕೂಂಡಂತೆ ಗಂಡ ನಡೆಸುತ್ತಿದ್ದ ಜಿಮ್ ನಲ್ಲೇ ಪತ್ನಿ ನೇಣಿಗೆ ಶರಣಾಗಿದ್ದಾಳೆ. ಪತಿ ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಮನನೊಂದಿದ್ದು, ಇಂದು(ಫೆಬ್ರವರಿ 10) ಪತಿ ನಡೆಸುತ್ತಿದ್ದ ಜಿಮ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಪತಿಯ ಗುಟ್ಟು ರಟ್ಟು: ಗಂಡನ ಜಿಮ್‌ ಸೆಂಟರ್​ನಲ್ಲೇ  ಆತ್ಮಹತ್ಯೆ ಮಾಡಿಕೊಂಡ ಪತ್ನಿ
Mandya Divya
Follow us
ರಮೇಶ್ ಬಿ. ಜವಳಗೇರಾ
|

Updated on: Feb 10, 2025 | 10:26 PM

ಮಂಡ್ಯ, (ಫೆಬ್ರವರಿ 10): ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ನಡೆಸುತ್ತಿದ್ದ ಜಿಮ್‌ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯಾ (27) ಮೃತ ಮಹಿಳೆ. ಈಕೆಯ ಪತಿ ಗಿರೀಶ್‌, ವೈಭವ ಹೆಸರಿನ ಜಿಮ್‌ ನಡೆಸುತ್ತಿದ್ದ. ಆದರೆ ಆತನಿಗೆ ಬೇರೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಪತ್ನಿಗೆ ಇತ್ತು. ಹೀಗಾಗಿ ಮನನೊಂದು ದಿವ್ಯಾ ಇಂದು (ಫೆಬ್ರವರಿ 10) ಪತಿಯ ಜಿಮ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಮಗಳನ್ನು ಅಳಿಯನೇ ಹೊಡೆದು ಕೊಂದಿರುವುದಾಗಿ ದಿವ್ಯಾ ಕುಟುಂಬಸ್ಥರು ಆರೋಪಿಸಿದ್ದು, ಜಿಮ್​ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಜಿಮ್‌ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಂಬಂಧಿಕರನ್ನು ಸಮಾಧಾನಪಡಿಸಿ ಹೊರಗೆ ಕಳುಹಿಸಿದ್ದಾರೆ. ಈ ವೇಳೆ ದಿವ್ಯಾಳ ಪತಿ ಗಿರೀಶ್, ಗಿರೀಶ್ ತಾಯಿ ವಿರುದ್ಧ ಗೃಹಿಣಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಅಳಿಯ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ಮೃತಪಟ್ಟಿದ್ದಾಳೆ. ಹೀಗಾಗಿ ಆತನನ್ನು ಬಂಧಿಸುವಂತೆ ಮೃತ ದಿವ್ಯಾಳ ಪೋಷಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ!

ಕಂಪ್ಯೂಟರ್​​ ಕೊಠಡಿಯಲ್ಲೇ ಶಿಕ್ಷಕಿ ಆತ್ಮಹತ್ಯೆ

ಕೋಲಾರ: ಇನ್ನು ಕೋಲಾರದ ಬಂಗಾರಪೇಟೆ ಪಟ್ಟಣದ ಮಾದಯ್ಯ ರಸ್ತೆಯಲ್ಲಿರುವ ಸ್ಮಾರ್ಟ್​​ ಕಂಪ್ಯೂಟರ್​​ ಇನ್ಸಿಟ್ಯೂಟ್​​ನ ಕೊಠಡಿಯಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಷ್ಮಾ(23) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಸುಷ್ಮಾ ಚಿಕ್ಕವಲಗಮಾದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ