Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದ್ದು, ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ ಕಟ್ಟಿಲ್ಲ.

Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ
ಮಂಡ್ಯ ಮೈ ಶುಗರ್​ ಪ್ಯಾಕ್ಟರಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2023 | 10:33 AM

ಮಂಡ್ಯ: ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯ(Mandya)ದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. ಹೌದು 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್​ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ನ್ನು ಬಾಕಿ ಉಳಿಸಿಕೊಂಡಿದೆ. ಇನ್ನು ರೋಗಗ್ರಸ್ಥ ಕಾರ್ಖಾನೆ ಎಂದೆ ಬಿಂಬಿಸಿಕೊಂಡಿರುವ ಮೈಶುಗರ್ ಫ್ಯಾಕ್ಟರಿ, ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಾರ್ಖಾನೆ ಪುನಾರಂಭಕ್ಕೆ 50 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಿತ್ತು.

ವಿದ್ಯುತ್ ಪೂರೈಸುವಂತೆ ಇಂಧನ ಸಚಿವರಿಗೆ MLC ಗೂಳಿಗೌಡ ಪತ್ರ

ಇನ್ನು ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿರುವ ಈ ಕಾರ್ಖಾನೆಗೆ ವಿದ್ಯುತ್ ಸರಬರಾಜು ಆಗಬೇಕಿದೆ. ಈ ಹಿನ್ನಲೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ, ಬಳಿಕ ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತೆ ಎಂದು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಮೈಶುಗರ್ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದ ಸಚಿವ ಶಿವಾನಂದ ಎಸ್ ಪಾಟೀಲ್

ಇನ್ನು ಇತ್ತೀಚೆಗಷ್ಟೇ ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್ ಚಾಲನೆ ನೀಡಿದ್ದರು. ಅವರಿಗೆ ಸಚಿವ ಚಲುವರಾಯಸ್ವಾಮಿ ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದರು. ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದ್ದು,. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲೆಯ ರೈತರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ