AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40,000 ರೂ. ಲಂಚಕ್ಕೆ ಬೇಡಿಕೆ: ಮುಂಗಡವಾಗಿ 5 ಸಾವಿರ ರೂ. ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ತಾಲೂಕಿನ ಬೇಲೂರು ಗ್ರಾಮ ಪಂಚಾಯತಿ ಕಾರ್ಯದರ್ಶಿ ದಯಾನಂದ್ ಎಂಬಾತ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ. ಮಂಜುನಾಥ್ ಎಂಬುವರ ಇ-ಸ್ವತ್ತು ಮಾಡಿಕೊಡಲು 40,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನ ತೆಗೆದುಕೊಳ್ಳುವ ವೇಳೆ ಸಿಕ್ಕಿಬಿದ್ದಿದ್ದಾನೆ.

40,000 ರೂ. ಲಂಚಕ್ಕೆ ಬೇಡಿಕೆ: ಮುಂಗಡವಾಗಿ 5 ಸಾವಿರ ರೂ. ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on: May 25, 2023 | 12:18 PM

Share

ಮಂಡ್ಯ: ತಾಲೂಕಿನ ಬೇಲೂರು ಗ್ರಾಮ ಪಂಚಾಯತಿ ಕಾರ್ಯದರ್ಶಿ ದಯಾನಂದ್ ಎಂಬಾತ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ. ಮಂಜುನಾಥ್ ಎಂಬುವರ ಇ-ಸ್ವತ್ತು ಮಾಡಿಕೊಡಲು 40,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಾರ್ಯದರ್ಶಿ. ಮುಂಗಡವಾಗಿ 5,000 ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಇನ್ನು ಲಂಚ ಕೇಳಿದ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದ ಮಂಜುನಾಥ್, ಈ ಹಿನ್ನೆಲೆ ಲೋಕಾಯುಕ್ತ ಡಿವೈಎಸ್​​ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿ, ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾನೆ.

ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪಶು ವೈದ್ಯಾಧಿಕಾರಿ

ಚಿತ್ರದುರ್ಗ: ಇತ್ತೀಚೆಗೆ ಲಂಚ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅದರಂತೆ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿತ್ತು. ಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಚಿಕ್ಕಜಾಜೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದಿದ್ದ. ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿತ್ತು.

ಇದನ್ನೂ ಓದಿ:ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ

13 ಸಾವಿರ ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ದಸ್ತು ಬರಹಗಾರ ಪರಮೇಶ್ವರ್ ಎಂಬುವವರು 13 ಸಾವಿರ ಹಣ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪರಮೇಶ್ವರ್​​ನನ್ನು ಬಂಧಿಸಿದ್ದರು.

ಮನೆ ಖರೀದಿಯ ಸೇಲ್ ಡೀಡ್ ನೋಂದಣಿ ಪತ್ರ ನೀಡಲು ಹರಿಹರದ ಮಂಜುನಾಥ್ ಎನ್ನುವರ ಬಳಿ ಪರಮೇಶ್ವರ್ 20 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಮಂಜುನಾಥ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಿನ್ನೆ ರಾತ್ರಿ ಸಬ್ ರಿಜಿಸ್ಟರ್ ಕಚೇರಿ ಬಳಿ ಮಂಜುನಾರ್​ನಿಂದ 13 ಸಾವಿರ ಲಂಚ ಪಡೆಯುವಾಗ ಪರಮೇಶ್ವರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದ. ಈ ವೇಳೆವ ಅರೋಪಿಯಿಂದ 40 ಸಾವಿರ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್​ಪಿ, ಎಂಎಸ್ ಕೌಲಾಪುರೆ, ಇನ್ಸ್ಪೆಕ್ಟರ್ ರಾಷ್ಟ್ರಪತಿ ಎಚ್ ಎಸ್, ಅಂಜನೇಯ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ