ತಮಿಳುನಾಡಿಗೆ ದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ, ಇತ್ತ ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ

ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದ ಬೆನ್ನೆಲೆ, ಇತ್ತ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ರಕ್ತ ಕೊಟ್ಟೇವು ಆದರೆ ನೀರು ಕೊಡೆವು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ ದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ, ಇತ್ತ ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ
ಕಾವೇರಿ ನದಿ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on:Aug 28, 2023 | 9:21 PM

ಮಂಡ್ಯ, ಆಗಸ್ಟ್​ 28: ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು (cauvery water) ನಿರ್ವಹಣಾ ಪ್ರಾಧಿಕಾರವು ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದ ಬೆನ್ನೆಲೆ ರಕ್ತ ಕೊಟ್ಟೇವು ಆದರೆ ನೀರು ಕೊಡೆವು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಳಿನ ಸಭೆ ನೋಡಿ ಹೋರಾಟದ ರೂಪರೇಷೆಗೆ ರೈತರ ತೀರ್ಮಾನಿಸಿದ್ದು, ರಾಷ್ಟ್ರೀಯ ಹೆದ್ದಾರಿ, ರೈಲು ತಡೆದು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಕೇಸ್ ಹಾಕಿದರೆ ಜೈಲಿಗೆ ಹೋಗಲು ಸಿದ್ಧ ಎಂದು ಅನ್ನದಾತರು ಗರಂ ಆಗಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವುದಾದರೆ ಮಂಡ್ಯದ ರೈತರಿಗೂ ನೀರು ಹರಿಸಿ. ಕೆಆರ್​ಎಸ್​ ಡ್ಯಾಂ ನಿರ್ವಹಣೆ ಮಾಡುತ್ತಿರುವುದು ಕರ್ನಾಟಕ ಸರ್ಕಾರ. ಕೆಆರ್​ಎಸ್​ ಡ್ಯಾಂ ನಿರ್ವಹಣೆಗೆ ಬೇರೆ ರಾಜ್ಯದವರು ಹಣ ನೀಡುತ್ತಿಲ್ಲ. ಆದರೆ ನೀರು ಬೇಕೆಂದು ಕೇಳುತ್ತಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರ ಮೂಲಕ ನಮ್ಮ ಹೋರಾಟ ತಡೆದಿದೆ.

ಇದನ್ನೂ ಓದಿ: ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಸೂಚನೆ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಹೇಳಿದ್ದೇನು?

ನಾಳೆ ಸಚಿವರು, ಶಾಸಕರ ಮನೆಗಳ ಎದುರು ಪ್ರತಿಭಟನೆ ಮಾಡುತ್ತೇವೆ. ತಮಿಳುನಾಡು ಸಿಎಂ ಸ್ಟಾಲಿನ್ ಓಲೈಕೆ ಮಾಡಲು ನೀರು ಹರಿಸುತ್ತಿದ್ದಾರೆ. ಒಂದು ವೇಳೆ ನಾಳೆಯಿಂದ ಹೆಚ್ಚುವರಿ ನೀರು ಹರಿಸಿದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ಮಂಡ್ಯ ಜಿಲ್ಲೆಯ ರೈತರ ಎಚ್ಚರಿಕೆ ನೀಡಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ಕೆಆರ್‌ಎಸ್‌ ಜಲಾಶಯದ ಬಳಿ ಪ್ರತಿಭಟನೆ ಮಾಡುವುದಾಗಿ ಭೂಮಿ ತಾಯಿ ಹೋರಾಟ ಸಮಿತಿ ತೀರ್ಮಾನ ಮಾಡಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಈ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿ ಮುಂದಿನ 15 ದಿನಗಳವರೆಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಹೇಳಿದೆ. ಪ್ರತಿದಿನ 24 ಸಾವಿರ ಕ್ಯೂಸೆಕ್ ಹರಿಸುವಂತೆ ಅವರು ವಾದಿಸಿದ್ದರು. ಆದರೆ ನಾವು ಅಷ್ಟು ನೀರು ಹರಿಸಲು ಸಾಧ್ಯವಿಲ್ಲವೆಂದು ವಾದ ಮಂಡಿಸಿದ್ದು, ಹಾಗಾಗಿ ಪ್ರತಿದಿನ 5 ಸಾವಿರ ಕ್ಯೂಸೆಕ್ ಹರಿಸಲು ತಿಳಿಸಿದೆ ಎಂದರು.

ಇದನ್ನೂ ಓದಿ: ಕರ್ನಾಟಕಕ್ಕೆ ಬಿಗ್ ಶಾಕ್, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ

ನಮ್ಮ ಬೆಳೆ, ಕುಡಿಯುವ ನೀರಿನ ಬಳಕೆ ಬಗ್ಗೆ ಮನವರಿಕೆ ಮಾಡುತ್ತೇವೆ. ನಮ್ಮ ಕಾನೂನು ಘಟಕದ ಜೊತೆ ಮಾತನಾಡುತ್ತೇನೆ. ಜಲಸಂಪನ್ಮೂಲ ಇಲಾಖೆ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Mon, 28 August 23

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ